ಟೀಂ ಇಂಡಿಯಾದ ಖ್ಯಾತ ಬೌಲರ್ ಯುಜವೇಂದ್ರ ಚಹಲ್ ಮತ್ತು ಪತ್ನಿ ಧನಶ್ರೀ ವರ್ಮಾ ಅವರನ್ನು ಕ್ರಿಕೆಟ್ ಲೋಕದಲ್ಲಿ ಕ್ಯೂಟ್ ಜೋಡಿ ಎಂದು ಕರೆಯಲಾಗುತ್ತದೆ. ಚಹಾಲ್ ಮತ್ತು ಧನಶ್ರೀ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟೀವ್ ಆಗಿರುತ್ತಾರೆ. ಪೋಟೋಗಳನ್ನು ಹಾಕುವ ಮೂಲಕ ಇವರಿಬ್ಬರೂ ಎಂದಿಗೂ ಸಂತಸದಿಂದ ಇರುತ್ತಿದ್ದರು. ಆದರೆ ಇದೀಗ ಇವರಿಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆಯೇ ಎಂಬ ಅನುಮಾನ ಮೂಡಿದೆ.
ಹೌದು ಯುಜವೇಂದ್ರ ಚಹಲ್ ಮತ್ತು ಪತ್ನಿ ಧನಶ್ರೀ ಶೀಘ್ರವೇ ಡಿವೋರ್ಸ್ ಪಡೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಆಪ್ತ ಮೂಲಗಳ ಪ್ರಕಾರ ಇಬ್ಬರು ಪ್ರತ್ಯೇಕವಾಗುವುದು ನಿಜ. ವಿಚ್ಛೇದನ ಪ್ರಕ್ರಿಯೆಗಳು ಇನ್ನೂ ಅಂತಿಮಗೊಂಡಿಲ್ಲ. ಎಲ್ಲಾ ಷರತ್ತುಗಳು ಪೂರ್ಣಗೊಂಡ ಬಳಿಕ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ.
ಇಬ್ಬರು ಪ್ರತ್ಯೇಕವಾಗಲು ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ದಂಪತಿ ಪ್ರತ್ಯೇಕವಾಗಿ ತಮ್ಮ ಜೀವನವನ್ನು ಮುಂದುವರಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಈ ವದಂತಿಗೆ ಪೂರಕ ಎಂಬಂತೆ ಇಬ್ಬರೂ ಇನ್ಸ್ಟಾದಲ್ಲಿ ಅನ್ಫಾಲೋ ಮಾಡಿದ್ದಾರೆ. ಚಹಲ್ ಅವರು ಧನಶ್ರೀ ಜೊತೆಗಿನ ಫೋಟೋ ಡಿಲೀಟ್ ಮಾಡಿದ್ದರೆ ಧನಶ್ರೀ ಚಹಲ್ ಅವರೊಂದಿಗೆ ಫೋಟೋ ಡಿಲೀಟ್ ಮಾಡಿಲ್ಲ.
PM Surya Ghar Yojana: ನಿಮ್ಮ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ಬೇಕಾ..? ಹಾಕಿದ್ರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ
ಭಾರತದ ಖ್ಯಾತ ಜೋಡಿಗಳಲ್ಲಿ ಒಬ್ಬರಾಗಿದ್ದ ಚಹಲ್ ಮತ್ತು ಧನಶ್ರೀ 2020ರ ಡಿಸೆಂಬರ್ನಲ್ಲಿ ಮದುವೆಯಾಗಿದ್ದರು. ಆ ಬಳಿಕ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಬ್ರೇಕ್ ಅಪ್ಗೆ ಮುಂದಾಗಿದ್ದಾರೆ ಎಂದು ಎರಡು ವರ್ಷದ ಹಿಂದೆ ಸುದ್ದಿ ಪ್ರಕಟವಾಗಿತ್ತು. ನಂತರ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳುವ ಮೂಲಕ ವದಂತಿಗೆ ತೆರೆ ಎಳೆದಿದ್ದರು.
ಕೊರೋನಾ ಕಾಲದ ಲಾಕ್ಡೌನ್ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು ಧನಶ್ರೀ ಎಂದು ಹೇಳಿದ್ದರು. ಹಿಂದೆ ಚಹಲ್ ಹೊಸ ಜೀವನ ಆರಂಭ ಎಂದು ಪೋಸ್ಟ್ ಹಾಕಿಕೊಂಡಿದ್ದರು. ಅದೇ ಸಮಯಕ್ಕೆ ಧನಶ್ರೀ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿದ್ದ ಸರ್ ನೇಮ್ ಚಹಲ್ ಪದವನ್ನು ಕಿತ್ತುಹಾಕಿ ಧನಶ್ರೀ ವರ್ಮಾ ಎಂದು ಬದಲಾವಣೆ ಮಾಡಿಕೊಂಡಿದ್ದರು.
ಸದ್ಯ ಟೀಂ ಇಂಡಿಯಾ ತಂಡದಲ್ಲಿ ಸ್ಥಾನ ಪಡೆಯಲು ಚಹಲ್ ವಿಫಲರಾಗಿದ್ದು 2023ರ ಜನವರಿಯಲ್ಲಿ ಕೊನೆಯ ಏಕದಿನ ಪಂದ್ಯವಾಡಿದ್ದರೆ, 2023ರ ಆಗಸ್ಟ್ನಲ್ಲಿ ಕೊನೆಯ ಟಿ20 ಪಂದ್ಯ ಆಡಿದ್ದರು. ಐಪಿಎಲ್ 2025 ರ ಮೆಗಾ ಹರಾಜಿಗೆ ಮೊದಲು ಚಹಲ್ ಅವರನ್ನು ರಾಜಸ್ಥಾನ್ ರಾಯಲ್ಸ್ ತಂಡದಿಂದ ಕೈಬಿಟ್ಟಿತ್ತು. ನಂತರ ನಡೆದ ಹರಾಜು ಪ್ರಕ್ರಿಯೆಯಲ್ಲಿ ಪಂಜಾಬ್ ಕಿಂಗ್ಸ್ 18 ಕೋಟಿ ರೂ. ನೀಡಿ ಚಹಲ್ ಅವರನ್ನು ಖರೀದಿಸಿತ್ತು. ಚಹಲ್ 160 ಐಪಿಎಲ್ ಪಂದ್ಯವಾಡಿ 22.44 ರ ಸರಾಸರಿಯಲ್ಲಿ 205 ವಿಕೆಟ್ ಪಡೆದಿದ್ದಾರೆ.