ಹಾವೇರಿ ನಗರಸಭೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ

ಹಾವೇರಿ: ಹಾವೇರಿ ನಗರಸಭೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ನಡೆಯಿತು. ಕಾಂಗ್ರೆಸ್ (Congress) ಬಹುಮತ ಇದ್ದರೂ, 6 ಕಾಂಗ್ರೆಸ್ ಸದಸ್ಯರು ಗೈರಾಗಿದ್ದು ಬಿಜೆಪಿ (BJP) ಬೆಂಬಲಿತ ಸದಸ್ಯರು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಹಾವೇರಿ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಶಶಿಕಲಾ ರಾಮು ಮಾಳಗಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಸಾತೇನಹಳ್ಳಿ ಕೈ ಎತ್ತುವ ಮೂಲಕ ಬಹುಮತದ ಆಧಾರದ ಮೇಲೆ ಚುನಾಯಿತರಾದರು. ಮತದಾನದ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು, ಪಟಾಕಿ ಸಿಡಿಸಿ, ಶಿಳ್ಳೆ, … Continue reading ಹಾವೇರಿ ನಗರಸಭೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ