ಬೆಂಗಳೂರು: ಎಂ ಎಲ್ ಎ ಟಿಕೆಟ್ ಕೊಡಿಸೋದಾಗಿ 5 ಕೋಟಿ ವಂಚಿನೆ ಪ್ರಕರಣದ ಆರೋಪಿಯಾಗಿರುವ ಚೈತ್ರಾ ಕುಂದಾಪುರ ಕೋರ್ಟ್ ಗೆ ಹಾಜರಾಗಿದ್ದಾರೆ. ಬಿಗ್ ಬಾಸ್ ಮನೆಯಿಂದಲೇ ಡೈರೆಕ್ಟ್ ಆಗಿ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಐದು ಕೋಟಿ ವಂಚನೆ ಆರೋಪ ಕೇಳಿ ಬಂದಿತ್ತು. ಇದೇ ಪ್ರಕರಣದಲ್ಲಿ ಜೈಲಿಗೂ ಹೋಗಿ ಬಂದಿದ್ದರು. ಬಳಿಕ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿಯಾಗಿ ಬಿಗ್ ಮನೆಗೆ ಹೋಗಿದ್ದರು.
ನಿಮಗೆ ಗೊತ್ತೆ..? ವೀಸಾ ಬೇಡ, ಭಾರತೀಯ Passport ಒಂದಿದ್ದರೆ ಸಾಕು ಈ ದೇಶಗಳಿಗೆ ಹೋಗಬಹುದು!
ಇದೀಗ ಕೋರ್ಟ್ ಖುದ್ದು ಹಾಜರಾತಿಗೆ ಸೂಚಿಸಿದ ಹಿನ್ನೆಲೆ, ಒಂದನೇ ಎಸಿಎಂಎಂ ಕೋರ್ಟ್ ಗೆ ಹಾಜರಾಗಿದ್ದಾರೆ. ಚೈತ್ರ, ಶ್ರೀಕಾಂತ್ ಸೇರಿದಂತೆ ಮೂವರು ಆರೋಪಿಗಳು ಕೋರ್ಟ್ ಗೆ ಹಾಜರಾಗಿದ್ದು, ವಿಚಾರಣೆ ಬಳಿಕ ಚೈತ್ರಾ ವಾಪಸ್ ಬಿಗ್ ಬಾಸ್ ಮನೆಗೆ ಹೋಗಿದ್ದಾರೆ. ಈ ಹಿಂದೆ ವರ್ತೂರು ಸಂತೋಷ್ ಬಿಗ್ ಬಾಸ್ ಮನೆಯಲ್ಲೇ ಅರೆಸ್ಟ್ ಆಗಿ ಜೈಲು ಸೇರಿದ್ದು, ಬಿಡುಗಡೆ ಬಳಿಕ ಮತ್ತೆ ಬಿಗ್ ಬಾಸ್ ಮನೆಗೆ ಹೋಗಿದ್ದರು.ಇದೀಗ ವಾರೆಂಟ್ ಜಾರಿ ಹಿನ್ನೆಲೆ ಬಿಗ್ ಬಾಸ್ ಮನೆಯಿಂದ ಚೈತ್ರ ಹೊರಬಂದಿದ್ದರು. ಈ ಹಿಂದೆ ಅನಾರೋಗ್ಯದಿಂದ ಒಂದು ದಿನ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆದು ಬಳಿಕ ಮರಳಿದ್ದರು.