ಕೈ ನೋವು ಇದ್ದರೂ ದ್ವಾರಕೀಶ್ಗೆ ಅಂತಿಮ ನಮನ ಸಲ್ಲಿಸಲು ಚಾಲೆಂಜಿಂಗ್ ಸ್ಟಾರ್ ಬಂದಿದ್ದಾರೆ. ನೋವಿನ ನಡುವೆಯೂ ಅವರು ಓಡೋಡಿ ಬಂದು ದ್ವಾರಕೀಶ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.
Bengaluru: ಬೇಸಿಗೆಯಲ್ಲಿ ಕೋಲ್ಡ್ ಬಿಯರ್ ಗೆ ಡಿಮ್ಯಾಂಡ್ – 11 ದಿನಗಳಲ್ಲಿ 17 ಲಕ್ಷ ಲೀ ಮಾರಾಟ!
ಹೃದಯಾಘಾತದಿಂದ ದ್ವಾರಕೀಶ್ ಅವರು ನಿಧನರಾದರು. ಕನ್ನಡ ಚಿತ್ರರಂಗಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ. 50ಕ್ಕೂ ಅಧಿಕ ಸಿನಿಮಾಗಳನ್ನು ನಿರ್ಮಿಸುವ ಮೂಲಕ ಹಲವರಿಗೆ ಅವಕಾಶ ನೀಡಿದ್ದಾರೆ. ಅನೇಕ ಸೂಪರ್ಹಿಟ್ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಕನ್ನಡ ಚಿತ್ರರಂಗದ ಬೆಳವಣಿಗೆಯಲ್ಲಿ ದ್ವಾರಕೀಶ್ ಅವರ ಕೊಡುಗೆ ಅಪಾರ. ಹಾಗಾಗಿ ಅವರ ನಿಧನಕ್ಕೆ ಸ್ಯಾಂಡಲ್ವುಡ್ನ ಅನೇಕರು ಕಂಬನಿ ಮಿಡಿದಿದ್ದಾರೆ. ಬೆಂಗಳೂರಿನ ನಿವಾಸದಲ್ಲಿ ದ್ವಾರಕೀಶ್ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿದ್ದು, ಅನೇಕ ಸೆಲೆಬ್ರಿಟಿಗಳು ಬಂದು ಅಂತಿಮ ದರ್ಶನ ಪಡೆದಿದ್ದಾರೆ. ಏಪ್ರಿಲ್ 17ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು.
ಚಾಮರಾಜಪೇಟೆಯಲ್ಲಿ ದ್ವಾರಕೀಶ್ ಅವರ ಅಂತ್ಯಕ್ರಿಯೆ ನಡೆಯಲಿದೆ. ದ್ವಾರಕೀಶ್ ಅಗಲಿಕೆಗೆ ದರ್ಶನ್ ಅವರು ಸೋಶಿಯಲ್ ಮೀಡಿಯಾದಲ್ಲೂ ಸಂತಾಪ ಸೂಚಿಸಿದ್ದಾರೆ. ‘ಕನ್ನಡ ಚಿತ್ರರಂಗದ ಧೀಮಂತ ನಿರ್ಮಾಪಕರಾಗಿ, ನಿರ್ದೇಶಕರಾಗಿ, ಜನಮೆಚ್ಚಿದ ಹಾಸ್ಯನಟ ‘ಪ್ರಚಂಡ ಕುಳ್ಳ’ನಾಗಿ 5 ದಶಕಗಳು ಸೇವೆ ಸಲ್ಲಿಸಿದ ನಮ್ಮೆಲ್ಲರ ಪ್ರೀತಿಯ ದ್ವಾರಕೀಶ್ ಸರ್ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ದರ್ಶನ್ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.