ಮಂಡ್ಯ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮಂಡ್ಯ ಕ್ಷೇತ್ರದ ಕುತೂಹಲ ಹೆಚ್ಚಾಗಿದೆ. ಬಿಜೆಪಿ ಜೆಡಿಎಸ್ ಮೈತ್ರಿಕೂಟವು ಸೀಟು ಹಂಚಿಕೆಯನ್ನು ಇನ್ನೂ ಅಂತಿಮ ಗೊಳಿಸಿಲ್ಲ. ಆದಾಗ್ಯೂ ಮಂಡ್ಯ ಕ್ಷೇತ್ರದ ಟಿಕೆಟ್ ಜೆಡಿಎಸ್ ಗೆ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ ಮಂಡ್ಯ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಿ ಹೊಸದಾಗಿ ನಿರ್ಮಾಣ ಮಾಡುವ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ಶಂಕುಸ್ಥಾಪನೆ ನೆರವೇರಿಸಿದರು.
ಇದೇ ವೇಳೆ ಮಂಡ್ಯ ಸಂಸದೀಯ ಸುಮಲತಾ, ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಶಾಸಕ ಗಣಿಗ ರವಿ, ಜೊತೆಯಾಗಿ ವೇದಿಕೆಯಲ್ಲಿ ಕಾಣಿಸಿಕೊಂಡರು. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ, ಕಳೆದ ಕೆಲವು ದಿನಗಳಿಂದ ಸುಮಲತಾ ಮತ್ತು ಚಲುವರಾಯಸ್ವಾಮಿ ಪರಸ್ಪರ ಟೀಕಾ ಪ್ರಹಾರದಲ್ಲಿ ನಿರತರಾಗಿದ್ದಾರೆ. ಹೀಗಿರುವಾಗ, ವೇದಿಕೆ ಹಂಚಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಶಾಸಕ ರವಿಕುಮಾರ್ ಗಣಿಗ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.