ಚಾಮರಾಜನಗರ:- ಬಿವೈ ವಿಜಯೇಂದ್ರ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಹಿನ್ನಲೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಯಡಿಯೂರಪ್ಪ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಭ್ರಮ ಮನೆ ಮಾಡಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಪಟಾಕಿ ಸಿಡಿಸಿ,ಸಿಹಿ ವಿತರಿಸಿ ಸಂಭ್ರಮಿಸಿದ್ದಾರೆ. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಣಯ್ ನೇತೃತ್ವದಲ್ಲಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.
ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿ.ಎಂ ಯಡಿಯೂರಪ್ಪಗೆ ಜೈಕಾರ ಕೂಗಿ ಘೋಷಣೆ ಹಾಕಿದ್ದಾರೆ. ಪಟಾಕಿ ಸಿಡಿಸಿ ಮಾಜಿ ಸಿ.ಎಂ.ಬಿಸ್ ವೈ ಅಭಿಮಾನಿಗಳು ಸಂಭ್ರಮಿಸಿದ್ದಾರೆ.