ಇಂದು ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಅಜೇಯ ಭಾರತ ತಂಡವು ನ್ಯೂಜಿಲೆಂಡ್ ತಂಡದ ವಿರುದ್ಧ ಇಂದು ಫೈನಲ್ ಆಟ ಆಡಲಿದೆ.
ಪ್ರೇಯಸಿ, ಆಕೆಯ ಮಗನನ್ನ ಹತ್ಯೆ ಪ್ರಕರಣ: ಜೋಡಿ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ!
ಚಾಂಪಿಯನ್ಸ್ ಟ್ರೋಫಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿರುವ ಟೀಮ್ ಇಂಡಿಯಾ ಇಂದು ಗೆಲ್ಲುವ ಫೇವರಿಟ್ ತಂಡ. ಆದರೆ ಟೀಮ್ ಇಂಡಿಯಾ ಪಾಲಿಗೆ ಸಂಡೆ ಸೂಪರಲ್ಲ. ಅದು ಸಹ ಐಸಿಸಿ ಫೈನಲ್ನಲ್ಲಿ..! ಹೌದು, ಐಸಿಸಿ ಟೂರ್ನಿ ಇತಿಹಾಸದಲ್ಲಿ ಭಾರತ ತಂಡ ಭಾನುವಾರ ಫೈನಲ್ ಪಂದ್ಯ ಗೆದ್ದಿಲ್ಲ. ಆದರೆ ಈ ಬಾರಿ ಇತಿಹಾಸ ಬದಲಿಸುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಇಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದರೆ ಟೀಮ್ ಇಂಡಿಯಾ ಪಾಲಿಗೆ ಸಂಡೇ ಕೂಡ ಸೂಪರ್ ಆಗಲಿದೆ.
ಇದಕ್ಕೂ ಮುನ್ನ ಟೀಮ್ ಇಂಡಿಯಾ ಭಾನುವಾರ 5 ಬಾರಿ ಐಸಿಸಿ ಟೂರ್ನಿ ಫೈನಲ್ ಪಂದ್ಯಗಳನ್ನು ಆಡಿದೆ. ಕಾಕತಾಳೀಯ ಎಂಬಂತೆ ಈ ಐದು ಪಂದ್ಯಗಳಲ್ಲೂ ಭಾರತ ತಂಡ ಸೋತಿದೆ.
2000ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯವು ಅಕ್ಟೋಬರ್ 15 ರಂದು, ಭಾನುವಾರ ನಡೆದಿತ್ತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಝಿಲೆಂಡ್ 4 ವಿಕೆಟ್ಗಳಿಂದ ಸೋಲನುಭವಿಸಿತ್ತು.
2003ರ ವಿಶ್ವಕಪ್ನ ಫೈನಲ್ ಮಾರ್ಚ್ 23 ರಂದು ಭಾನುವಾರ ನಡೆಯಿತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 125 ರನ್ಗಳಿಂದ ಸೋಲೊಪ್ಪಿಕೊಂಡಿತು.
2014ರ ಟಿ20 ವಿಶ್ವಕಪ್ ಫೈನಲ್ ಪಂದ್ಯ ಏಪ್ರಿಲ್ 4 ರಂದು ಭಾನುವಾರ ನಡೆಯಿತು. ಶ್ರೀಲಂಕಾ ವಿರುದ್ಧದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್ಗಳಿಂದ ಸೋಲನುಭವಿಸಿತ್ತು.
2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ಕೂಡ ನಡೆದಿರುವುದು ಭಾನುವಾರ. ಜೂನ್ 18 ರಂದು ನಡೆದಿದ್ದ ಈ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ 180 ರನ್ಗಳಿಂದ ಪರಾಜಯಗೊಂಡಿತು.
2023ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಸಹ ಭಾನುವಾರದಂದೇ ಜರುಗಿತು. ನವೆಂಬರ್ 19 ರಂದು ಅಹಮದಾಬಾದ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಭಾರತ 6 ವಿಕೆಟ್ಗಳಿಂದ ಸೋಲೊಪ್ಪಿಕೊಂಡಿತ್ತು.
ಅಂದರೆ ಐಸಿಸಿ ಟೂರ್ನಿಗಳಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಒಮ್ಮೆಯೂ ಗೆದ್ದಿಲ್ಲ. ಹೀಗಾಗಿ ಇಂದಿನ ಪಂದ್ಯ ಕಾದು ನೋಡಬೇಕಾಗಿದೆ.