ಭಾರತ ತಂಡವು ಫೆಬ್ರವರಿ 20 ರಿಂದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.
ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ ಎಂದು ವರದಿಯಾಗಿದೆ.
ಬೆಳ್ಳಂ ಬೆಳಿಗ್ಗೆ ಭ್ರಷ್ಟರಿಗೆ ಶಾಕ್ ಕೊಟ್ಟ “ಲೋಕಾಯುಕ್ತ”: 25 ಕಡೆ ದಾಳಿ, ಪರಿಶೀಲನೆ!
ಗ್ರೂಪ್-ಎ ನಲ್ಲಿ ಕಾಣಿಸಿಕೊಂಡಿರುವ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಎದುರಿಸಲಿದ್ದು, ಎರಡನೇ ಮ್ಯಾಚ್ನಲ್ಲಿ ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ಹಾಗೆಯೇ ಮೂರನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡದ ವಿರುದ್ಧ ಸೆಣಸಲಿದೆ. ಅದರಂತೆ ಟೀಮ್ ಇಂಡಿಯಾದ ಕರಡು ವೇಳಾಪಟ್ಟಿ ಈ ಕೆಳಗಿನಂತಿದೆ…
ಫೆಬ್ರವರಿ 20, 2025: ಭಾರತ Vs ಬಾಂಗ್ಲಾದೇಶ್
ಫೆಬ್ರವರಿ 23, 2025: ಭಾರತ Vs ನ್ಯೂಝಿಲೆಂಡ್
ಮಾರ್ಚ್ 1, 2025: ಭಾರತ Vs ಪಾಕಿಸ್ತಾನ್.
ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯು ಪಾಕಿಸ್ತಾನದಲ್ಲಿ ನಡೆಯಲಿದೆ. ಅಲ್ಲದೆ ಈ ಟೂರ್ನಿಗಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಮೂರು ಸ್ಟೇಡಿಯಂಗಳನ್ನು ಫೈನಲ್ ಮಾಡಿದ್ದು, ಅದರಂತೆ ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿಯಲ್ಲಿ ಪಂದ್ಯಗಳು ನಡೆಯಲಿದೆ.
ಇಲ್ಲಿ ಟೀಮ್ ಇಂಡಿಯಾ ಪಂದ್ಯಗಳಿಗೆ ಲಾಹೋರ್ನ ಗಡ್ಡಾಫಿ ಸ್ಟೇಡಿಯಂ ಅನ್ನು ನಿಗದಿ ಮಾಡಲಾಗಿದೆ. ಅದರಂತೆ ಮೊದಲ ಸುತ್ತಿನಲ್ಲಿ ಭಾರತ ತಂಡವು ತನ್ನೆಲ್ಲಾ ಪಂದ್ಯಗಳನ್ನು ಲಾಹೋರ್ನಲ್ಲಿ ಆಡಲಿದೆ ಎಂದು ವರದಿಯಾಗಿದೆ.
ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಆಡಲು ಬಿಸಿಸಿಐ ನಿರಾಕರಿಸಿದೆ. ಇದಾಗ್ಯೂ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕರಡು ವೇಳಾಪಟ್ಟಿಯೊಂದಿಗೆ ಭಾರತದ ಪಂದ್ಯಗಳಿಗೆ ಸ್ಥಳ ನಿಗದಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.