ಬಹುದಿನಗಳಿಂದ ಎದುರು ನೋಡ್ತಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗೆ ಕೌಂಟ್ಡೌನ್ ಶುರುವಾಗಿದೆ. ಈ ಮಹತ್ವದ ಟೂರ್ನಿಗೆ ಕೇವಲ 45 ದಿನಗಳು ಮಾತ್ರ ಬಾಕಿ ಇದ್ದು ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟಿಸಲು ಬಿಸಿಸಿಐ ಮುಂದಾಗಿದೆ. ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ಘೋಷಿಸಲು ಜನವರಿ 12ರವರೆಗೆ ಗಡುವು ವಿಧಿಸಲಾಗಿದ್ದು,
Heart Health: ನಿಮಗೆ ಹೃದಯದ ಸಮಸ್ಯೆ ಇದೆಯಾ..? ಹಾಗಾದ್ರೆ ವಾರಕ್ಕೆ ಎರಡು ಬಾರಿ ಮೀನು ತಿನ್ನಿ ಸಾಕು
ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿಯು ಜನವರಿ 22 ರಿಂದ ಶುರುವಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ 5 ಟಿ20 ಹಾಗೂ 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಈ ಪಂದ್ಯಗಳ ಬಳಿಕ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಗಾಗಿ ದುಬೈಗೆ ತೆರಳಲಿದೆ. ಇನ್ನು ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಆರಂಭವಾಗಲಿದೆ.
ಅದರಂತೆ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದ್ದು, ಈ ಬದಲಾವಣೆಯ ಪ್ರಮುಖಾಂಶಗಳು ಈ ಕೆಳಗಿನಂತಿದೆ
- ಇಂಗ್ಲೆಂಡ್ ವಿರುದ್ಧದ ಸರಣಿ ವೇಳೆ ಜಸ್ಪ್ರೀತ್ ಬುಮ್ರಾಗೆ ಸಂಪೂರ್ಣ ವಿಶ್ರಾಂತಿ ನೀಡಲಾಗುತ್ತದೆ.
- ಮೊಹಮ್ಮದ್ ಸಿರಾಜ್ಗೆ 5 ಪಂದ್ಯಗಳ ಟಿ20 ಸರಣಿ ವೇಳೆ ರೆಸ್ಟ್ ನೀಡಲು ನಿರ್ಧರಿಸಲಾಗಿದೆ.
- ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಏಕದಿನ ಸರಣಿಯ ಮೂರು ಪಂದ್ಯಗಳಲ್ಲೂ ಕಾಣಿಸಿಕೊಳ್ಳಲಿದ್ದಾರೆ.
- ಏಕದಿನ ಸರಣಿ ವೇಳೆ ಮೊಹಮ್ಮದ್ ಸಿರಾಜ್ ಕೂಡ ತಂಡಕ್ಕೆ ಆಗಮಿಸಲಿದ್ದಾರೆ.
- ಮೊಹಮ್ಮದ್ ಶಮಿ ಅವರನ್ನು ಫಿಟ್ನೆಸ್ ಟೆಸ್ಟ್ ಬಳಿಕ ಏಕದಿನ ತಂಡಕ್ಕೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ.
- ಶ್ರೇಯಸ್ ಅಯ್ಯರ್ ಹಾಗೂ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.
- ಯಶಸ್ವಿ ಜೈಸ್ವಾಲ್ ಅವರನ್ನು ಭಾರತ ಏಕದಿನ ತಂಡದ ಹೆಚ್ಚುವರಿ ಆರಂಭಿಕನಾಗಿ ಆಯ್ಕೆ ಮಾಡಲು ನಿರ್ಧರಿಸಲಾಗಿದೆ.
- ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರನ್ನು ಏಕದಿನ ತಂಡಕ್ಕೆ ಪರಿಗಣಿಸಲು ಬಿಸಿಸಿಐ ಆಯ್ಕೆ ಸಮಿತಿ ಚರ್ಚಿಸಿದೆ.
- ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳಲಿರುವ ಬಹುತೇಕ ಆಟಗಾರರು ಚಾಂಪಿಯನ್ಸ್ ಟ್ರೋಫಿಗೂ ಆಯ್ಕೆಯಾಗಲಿದ್ದಾರೆ.
- ಜನವರಿ 12 ರಂದು ಚಾಂಪಿಯನ್ಸ್ ಟ್ರೋಫಿ ಮತ್ತು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಘೋಷಿಸುವ ಸಾಧ್ಯತೆಯಿದೆ.