ಬೆಂಗಳೂರು:- ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕಲಘಟಗಿ: ಹಟಗಿನಾಳ ಗ್ರಾಮದ ಕಲಕುಂಡಿ ಅರಣ್ಯ ಪ್ರದೇಶದಲ್ಲಿ ಸೆರೆ ಸಿಕ್ಕ ಮೊಸಳೆ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಮಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವ ಇದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 1 ರಿಂದ ಡಿಸೆಂಬರ್ 3 ರವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ತಮಿಳುನಾಡಿನ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ತಮಿಳುನಾಡು, ಕೇರಳ, ಆಂಧ್ರದ ಕಡಲತೀರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕಳೆದ ಎರಡು ವಾರಗಳಿಂದ ಕರ್ನಾಟಕದಲ್ಲಿ ಮೈಕೊರೆಯುವಷ್ಟು ಚಳಿತ್ತು. ಆದರೆ, ಕಳೆದ 24 ಗಂಟೆಯಲ್ಲಿ ಚಳಿ ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.