ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಂದು ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಹನಿ ಬೀಳುವ ಸಾಧ್ಯತೆಗಳಿರಲಿವೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ನಾಳೆ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲೂ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ. ಹವಾಮಾನ ವರದಿಯ ಪ್ರಕಾರ ಕರ್ನಾಟಕದಲ್ಲಿ ಚಂಡಮಾರುತ ಸೇರಿದಂತೆ ಯಾವುದೇ ರೀತಿಯ ಮಳೆಯ ಭೀತಿ ಇಲ್ಲ. ಪರಿಣಾಮವಾಗಿ ಭಾರಿ ಮಳೆ, ಗುಡುಗು ಸಹಿತ ಮಳೆ ಹಾಗೂ ಮೀನುಗಾರರಿಗೆ ಯಾವುದೇ ರೀತಿಯ ಮುನ್ನೆಚ್ಚರಿಕೆಯೂ ಇಲ್ಲ ಅಂತ ಹೇಳಿದೆ.
ಇವತ್ತು ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಬೆಳಗಿನ ಜಾನ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ. ನಾಳೆ ಡಿಸೆಂಬರ್ 23 ಮತ್ತು ನಾಡಿದ್ದು ನಗರದಲ್ಲಿ ಇದೇ ವಾತಾವರಣ ಇರಲಿದೆ ಎಂದು ಹವಾಮಾನ ಕೇಂದ್ರ ಮಾಹಿತಿ ನೀಡಿದೆ