ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಶ್ಲೀಲ ವಿಡಿಯೋ ವೈರಲ್ ಕೇಸ್: ಇಂದು ಅಪ್ಪ-ಮಗನ ಬೇಲ್ ಭವಿಷ್ಯ..!
ತುಮಕೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಉಷ್ಣ ಅಲೆ ಇರಲಿದೆ.
ಮೇ 7ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ರಾಮನಗರ,ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಗುರುವಾರ ಕುಂದಾಪುರ, ಬೆಂಗಳೂರು ಸೇರಿ ಹಲವೆಡೆ ಮಳೆಯಾಗಿದೆ. ರಾಯಚೂರಿನಲ್ಲಿ 43.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಎಚ್ಎಎಲ್ನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 39.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)