ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯನ್ನು ನಿರೀಕ್ಷಿಸಬಹುದು.
ಬೆಂಗಳೂರ ಹವಾಮಾನ ಕೇಂದ್ರದ ಮೂಲಗಳ ಪ್ರಕಾರ, ಬೆಂಗಳೂರು ಮಹಾನಗರದ ಕೆಲವು ಪ್ರದೇಶಗಳಲ್ಲಿ ಮುಂಜಾನೆ ಹೊತ್ತು ಮಂಜು ಮುಸುಕಿದ ವಾತಾವರಣದ ಜತೆಗೆ ಸಾಧಾರಣ ಮಳೆ ಬೀಳಬಹುದು. ವಾತಾವರಣದಲ್ಲಿ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಶಿಯಸ್ ಮತ್ತು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಶಿಯಸ್ ನಡುವೆ ಇರಲಿದೆ.
ಇನ್ನುಳಿದ ಹಾಗೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರಗಳಲ್ಲಿ ಜಿಲ್ಲೆಗಳಲ್ಲಿ ಚಳಿಯ ಜೊತೆಗೆ ಸಾಧಾರಣ ಮಳೆಯೂ ಬೀಳಬಹುದು