ರಾಯಚೂರು ; ಜಿಲ್ಲೆಯ ಚಂದ್ರಬಂಡ ಮುಖ್ಯರಸ್ತೆ ಬಂದ್ ಮಾಡುವ ಮೂಲಕ ರೈತರು ಇಂದು ಪ್ರತಿಭಟನೆ ನಡೆಸಿದ್ದಾರೆ. ಅಕ್ಕಲಕೋಟೆಯಿಂದ ಆಂಧ್ರಪ್ರದೇಶದ ಕರ್ನೂಲ್ ವರೆಗೆ ಭಾರತ್ ಮಾಲಾ ಯೋಜನೆ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ ನಿರ್ಮಾಣ ಮಾಡುತ್ತಿದ್ದು, ರೈತರ ಹೊಲಗಳಿಗೆ ಹೋಗುವ ರಸ್ತೆಗಳು ಬಂದ್ ಮಾಡಿ ಕಾಮಗಾರಿ ನಡೆಯುತ್ತಿದೆ.
ಇದರಿಂದ ರಾಯಚೂರು ತಾಲೂಕಿನ ಚಂದ್ರಬಂಡ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ರೈತರು ಪರದಾಟ ನಡೆಸುತ್ತಿದ್ದು, ವ್ಯವಸಾಯ ಮಾಡಲು ಹೊಲಗಳಿಗೆ ಹೋಗಲು ರಸ್ತೆ ಇಲ್ಲದೆ ರೈತರು ಪರದಾಟ ನಡೆಸಿದ್ದಾರೆ.

ಹೀಗಾಗಿ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ರೈತರಿಗೆ ಅನ್ಯಾಯ ಆಗಿದೆ ಎಂದು ರಸ್ತೆ ತಡೆ ಮಾಡುವ ಮೂಲಕ ರೈತರು ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಬಗರಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
