ಮೈಸೂರು:ದೇಶದಲ್ಲಿ ಬದಲಾವಣೆ ವಿರೋಧ ಪಕ್ಷದಿಂದ ಸಾಧ್ಯವಿಲ್ಲ. ಆಳುವ ಪಕ್ಷದಿಂದಲೂ ಆಗುತ್ತಿಲ್ಲ. ನಮ್ಮಿಂದ ಮಾತ್ರವೇ ಬದಲಾವಣೆ ಸಾಧ್ಯ ಎಂದು ನಟ ಪ್ರಕಾಶ್ ರೈ ತಿಳಿಸಿದರು. ಜನಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಬದಲಾವಣೆ ವಿರೋಧ ಪಕ್ಷದಿಂದ ಸಾಧ್ಯವಿಲ್ಲ. ಆಳುವ ಪಕ್ಷದಿಂದಲೂ ಆಗುತ್ತಿಲ್ಲ. ನಮ್ಮಿಂದ ಮಾತ್ರವೇ ಬದಲಾವಣೆ ಸಾಧ್ಯ.
ಈ ಬಾರಿಯ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಬದಲಾವಣೆಯನ್ನು ತಂದುಕೊಳ್ಳಬೇಕು. ಮೊದಲು, ಈ ಕೊರೊನಾ ಸೋಂಕನ್ನು ಕೆಳಗಿಳಿಸೋಣ ಎಂದು ಮನವಿ ಮಾಡಿದರು. ನಾನು ಬಲಶಾಲಿ ಅಲ್ಲ, ತುಂಬಾ ಬಲಹೀನ ಆಗುತ್ತಿದ್ದೇನೆ ಎನ್ನುವುದು ಗೊತ್ತಾಗಿರುವುದರಿಂದಲೇ ಮಹಾಪ್ರಭುವಿನ ಮುಖದಲ್ಲಿ ಆತಂಕ ಗೋಚರಿಸುತ್ತಿದೆ.
400 ಸ್ಥಾನ ಗಳಿಸುತ್ತೇವೆ ಎನ್ನುತ್ತಾರೆ. ಅದು ಅವರ ನಂಬಿಕೆ ಅಲ್ಲ, ಭಯ. ತುಂಬಾ ವಿಶ್ವಾಸದಿಂದ ಮಾತನಾಡಿದಾಗ, ಪ್ರಶ್ನಿಸುವವರನ್ನು ಜೈಲಿಗೆ ಕಳುಹಿಸಿದಾಗ, ಇಡಿಯಿಂದ ದಾಳಿ ಮಾಡಿಸಿದಾಗ ಅವರು ಹೆದರಿದ್ದಾರೆ ಎನ್ನುವುದು ಗೊತ್ತಾಗುತ್ತದೆ ಎಂದು ಟೀಕಿಸಿದರು.