ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್ ಕುಮಾರಸ್ವಾಮಿರವರ ಪರವಾಗಿ ಚನ್ನಪಟ್ಟಣ ನಗರದ ವಿವಿಧ ವಾರ್ಡ್ ಗಳಲ್ಲಿ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಮತಯಾಚನೆ ನಡೆಸಿದರು.ಚನ್ನಪಟ್ಟಣ ನಗರಸಭೆಯ ವಾರ್ಡ್ ನಂಬರ್ 18, 19ರಲ್ಲಿ ಬರುವ ಹನುಮಂತ ನಗರ, ಬಸವೇಶ್ವರ ನಗರ, ಯಾರಬ್ ನಗರ ಸೇರಿದಂತೆ ವಿವಿಧ ಏರಿಯಾಗಳಲ್ಲಿ ಶನಿವಾರ ದಿನವಿಡೀ ಬಂಡೆಪ್ಪ ಖಾಶೆಂಪುರ್ ರವರು ಮನೆ, ಅಂಗಡಿಗಳಿಗೆ ತೆರಳಿ ನಿಖಿಲ್ ಕುಮಾರಸ್ವಾಮಿರವರಿಗೆ ಮತ ನೀಡುವಂತೆ ಮನವಿ ಮಾಡಿದರು.
Marigold: ಈ ವಿಧಾನ ಅನುಸರಿಸಿ ಚೆಂಡು ಹೂ ಬೆಳೆದರೆ 1 ಎಕರೆಯಲ್ಲಿ ಲಕ್ಷಗಟ್ಟಲೆ ಹಣ ಗಳಿಸಬಹುದು!
ನೂರಾರು ಸಂಖ್ಯೆಯಲ್ಲಿ ಸೇರಿದ್ದ ಜೆಡಿಎಸ್, ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು, ಮಹಿಳೆಯರು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರಿಗೆ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ಬಂಡೆಪ್ಪ ಖಾಶೆಂಪುರ್ ರವರು, ನಿಖಿಲ್ ಕುಮಾರಸ್ವಾಮಿರವರು ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅವರ ಗೆಲುವಿಗಾಗಿ ಎಲ್ಲರೂ ಸೇರಿ ಶ್ರಮಿಸಬೇಕಾಗಿದೆ. ನಿಖಿಲ್ ಕುಮಾರಸ್ವಾಮಿರವರ ಪರವಾಗಿ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ ಎಂದರು.
ಕೇಂದ್ರ ಸಚಿವರಾಗಿರುವ ಹೆಚ್.ಡಿ ಕುಮಾರಸ್ವಾಮಿರವರು ಕ್ಷೇತ್ರದ ಒಳಿತಿಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅವರು ಕೇಂದ್ರ ಸಚಿವರಾಗಿರುವುದರಿಂದ ಚನ್ನಪಟ್ಟಣ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದೆ. ಬಿಜೆಪಿ, ಜೆಡಿಎಸ್ ನಾಯಕರು ಒಂದಾಗಿ ನಿಖಿಲ್ ರವರಿಗೆ ಎನ್ಡಿಎ ಟಿಕೆಟ್ ನೀಡಿದ್ದೇವೆ.
ನಿಖಿಲ್ ರವರನ್ನು ಗೆಲ್ಲಿಸುವ ಮೂಲಕ ಕುಮಾರಸ್ವಾಮಿರವರ ಕೈ ಬಲಪಡಿಸಬೇಕಾಗಿದೆ. ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಒಳ್ಳೆಯ ಅಭ್ಯರ್ಥಿಯಾಗಿದ್ದಾರೆ. ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ವಕ್ತಾರ ಸಿ.ಎಂ ನಾಗರಾಜ, ಎನ್ಡಿಎ ಮುಖಂಡರಾದ ಶಾಂತಲಿಂಗ ಸಾವಳಗಿ, ಅಶ್ವಥ್, ಕಾರ್ತಿಕ್, ಪ್ರಸಾದ್, ಶರತ್ ಸೇರಿದಂತೆ ಅನೇಕರಿದ್ದರು.