ಬೆಂಗಳೂರು:- ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ
ಇಂದು ಪ್ರಕಟಗೊಳ್ಳಲಿದ್ದು, ಮತ ಎಣಿಕೆ ಪ್ರಕ್ರಿಯೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ.
ಹೊಟ್ಟೆ ತುಂಬಾ ಚೆನ್ನಾಗಿ ತಿಂದು ತೂಕ ಕಳೆದುಕೊಳ್ಳಬಹುದು, ಹೇಗೆ ಗೊತ್ತಾ? ಈ ಸ್ಟೋರಿ ನೋಡಿ!
ಮೂರು ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಕಾಂಗ್ರೆಸ್ ಪಕ್ಷ ತೀವ್ರ ಪೈಪೋಟಿ ಒಡ್ಡಿದ್ದು, ಯಾರಿಗೆ ಅಧಿಕಾರ ಸಿಗಲಿದೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳುತ್ತದೆ.
ಚನ್ನಪಟ್ಟಣದಲ್ಲಿ ಅತ್ಯಧಿಕ ಮತದಾನ 88.80% ರಷ್ಟು ಮತದಾನ ನಡೆದರೆ, ಶಿಗ್ಗಾವಿಯಲ್ಲಿ 80.48%ರಷ್ಟು ಹಾಗೂ ಸಂಡೂರಿನಲ್ಲಿ 76.24ರಷ್ಟು ಮತದಾನ ನಡೆದಿದೆ. ನಿಖಿಲ್ ಕುಮಾರಸ್ವಾಮಿ ವಿರುದ್ಧ ಸಿಪಿ ಯೋಗೇಶ್ವರ (ಚನ್ನಪಟ್ಟಣ), ಭರತ್ ಬೊಮ್ಮಾಯಿ ವಿರುದ್ಧ ಯಾಸಿರ್ ಖಾನ್ ಪಠಾಣ್ (ಶಿಗ್ಗಾವಿ), ಬಂಗಾರು ಹನುಮಂತು ವಿರುದ್ಧ ಅನ್ನಪೂರ್ಣ (ಸಂಡೂರು) ಸ್ಪರ್ಧಿಸಿದ್ದಾರೆ. ಮತದಾರರು ಯಾರಿಗೆ ಅಧಿಕಾರ ನೀಡಲಿದ್ದಾರೆ ಎಂದು ಇಂದು ತಿಳಿಯಲಿದೆ.
ಸಂಡೂರಿನಲ್ಲಿ ಎನ್’ಡಿಎ ಅಭ್ಯರ್ಥಿಯಾಗಿ ಬಂಗಾರು ಹನುಮತು, ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ ಅವರು ಕಣದಲ್ಲಿದ್ದಾರೆ.ಚನ್ಪಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ.ಯೋಗೇಶ್ವರ್, ಎನ್’ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಮತ್ತು ಶಿಗ್ಗಾಂವಿ ಕ್ಷೇತ್ರದಲ್ಲಿ ಎನ್’ಡಿಎ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸೇರಿ ಒಟ್ಟು 45 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.