ನವದೆಹಲಿ:- ಅಂಬೇಡ್ಕರ್ ಜಪ ಪಠಿಸುವುದು ಫ್ಯಾಶನ್ ಆಗಿಬಿಟ್ಟಿದೆ ಎಂಬ ಅಮಿತ್ ಶಾ ಮಾತು ಭಾರೀ ವಿವಾದಕ್ಕೆ ಎಡೆಮಾಡಿ ಕೊಟ್ಟಿತ್ತು. ಇದೇ ವಿಚಾರವಾಗಿ ಇದೀಗ ಅಮಿತ್ ಶಾ ಸ್ಪಷ್ಟನೆ ಕೊಟ್ಟಿದ್ದಾರೆ.
ಚಳಿ ತಾಳಲಾರದೇ ಕೆಳಗೆ ಬಿದ್ದ ಮಧುಮಗ: ಹುಡುಗನನ್ನು ವಲ್ಲೆ ಎಂದ ಮದುಮಗಳು!
ಸಂವಿಧಾನ ವಿರೋಧ ಹಾಗೂ ಅಂಬೇಡ್ಕರ್ ವಿರೋಧಿಯಾದ ಕಾಂಗ್ರೆಸ್ ಸುಳ್ಳುಗಳನ್ನು ಹರಡುತ್ತಿದೆ. ನಾನು ಅಂಬೇಡ್ಕರ್ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ನನ್ನ ಮಾತನ್ನು ತಿರುಚಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ವಿರೋಧ ಪಕ್ಷವು ಸಂಸತ್ತಿನಲ್ಲಿ ನಾನು ಮಾಡಿದ ಟೀಕೆಗಳನ್ನು ತಿರುಚಿದೆ ಮತ್ತು ಅಂಬೇಡ್ಕರ್ ವಿರೋಧಿ ನಿಲುವನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು.
ರಾಜ್ಯಸಭೆಯಲ್ಲಿ ಸಂವಿಧಾನದ ಚರ್ಚೆಯ ವೇಳೆ ಮಾಡಿದ ಟೀಕೆಗಳ ಕುರಿತು ಪ್ರತಿಕ್ರಿಯಿಸಿದ ಅಮಿತ್ ಶಾ, “ನನ್ನ ಹೇಳಿಕೆಗಳನ್ನು ತಪ್ಪಾಗಿ ನಿರೂಪಿಸಲಾಗಿದೆ. ಕಾಂಗ್ರೆಸ್ ಸುಳ್ಳು ಸುದ್ದಿಗಳನ್ನು ಹರಡುತ್ತದೆ, ನಾನು ಅಂಬೇಡ್ಕರ್ ವಿರುದ್ಧ ಮಾತನಾಡಿಲ್ಲ. ಸಂಸತ್ತಿನಲ್ಲಿ ಮಾಡಿದ ಕಾಮೆಂಟ್ಗಳನ್ನು ಕಾಂಗ್ರೆಸ್ ತಿರುಚಿದ ರೀತಿ ಅತ್ಯಂತ ಖಂಡನೀಯವಾಗಿದೆ” ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಂಬೇಡ್ಕರ್ ಮತ್ತು ಸಂವಿಧಾನ ವಿರೋಧಿ ಪಕ್ಷವಾಗಿದೆ. ಬಿಆರ್ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡದಿರಲು ಕಾಂಗ್ರೆಸ್ ಪ್ರಯತ್ನಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಘಟನೆ ಹಿನ್ನೆಲೆ:
ನಿನ್ನೆ ರಾಜ್ಯಸಭೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಂಬೇಡ್ಕರ್ ಜಪ ಪಠಿಸುವುದು ಫ್ಯಾಶನ್ ಆಗಿಬಿಟ್ಟಿದೆ. ಈ ರೀತಿ 100 ಬಾರಿ ಅಂಬೇಡ್ಕರ್ ಹೆಸರು ಹೇಳುವ ಬದಲು ದೇವರ ನಾಮವನ್ನಾದರೂ ಪಠಿಸಿದ್ದರೆ ಏಳೇಳು ಜನ್ಮದಲ್ಲೂ ಸ್ವರ್ಗಕ್ಕೆ ಹೋಗುತ್ತಿದ್ದಿರಿ ಎಂದು ವ್ಯಂಗ್ಯವಾಡಿದ್ದರು. ಇದಕ್ಕೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿ, ಅಂಬೇಡ್ಕರ್ ಕುರಿತು ಅವಮಾನಕಾರಿಯಾಗಿ ಮಾತನಾಡಿದ ಅಮಿತ್ ಶಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.