ವಾಟ್ಸ್ಆ್ಯಪ್ ಅಪ್ಡೇಟ್ಗಳ ಟ್ರ್ಯಾಕರ್, WabetaInfo ನ ವರದಿಯ ಪ್ರಕಾರ, ಮೆಟಾ-ಮಾಲೀಕತ್ವದ ಇನ್ಸ್ಟಂಟ್ ಮೆಸೇಜಿಂಗ್ ಅಪ್ಲಿಕೇಶನ್ ಬಳಕೆದಾರರಿಗೆ ಚಾಟ್ ಪಟ್ಟಿಯನ್ನು ಫಿಲ್ಟರ್ ಎಂಬ ಹೊಸ ವೈಶಿಷ್ಟ್ಯವನ್ನು ನೀಡಲು ಮುಂದಾಗಿದೆ.
ವಾಟ್ಸ್ಆ್ಯಪ್ ಬೀಟಾ 2.23.14.17 ಅಪ್ಡೇಟ್ನಲ್ಲಿ ಇದು ಕಂಡುಬಂದಿದೆ. ಈ ಹೊಸ ಟೂಲ್ ಬಗ್ಗೆ ಸ್ಕ್ರೀನ್ ಶಾಟ್ ಕೂಡ ಹರಿದಾಡುತ್ತಿದೆ. ಈ ಆಯ್ಕೆಯ ಮೂಲಕ ಚಾಟ್ ಲಿಸ್ಟ್ ಅನ್ನು ಸುಲಭವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ.
ಮಾಹಿತಿಯ ಪ್ರಕಾರ, ಫಿಲ್ಟರ್ನಲ್ಲಿ ಮೂರು ಆಯ್ಕೆಗಳು ಇರಲಿದೆ. ಅನ್ರೀಡ್ ಮೆಸೇಜೆಸ್, ವೈಯಕ್ತಿಕ ಸಂಭಾಷಣೆಗಳು ಮತ್ತು ವ್ಯವಹಾರ ಸಂಭಾಷಣೆಗಳು ಹೀಗೆ ಮೂರು ಆಯ್ಕೆಗಳು ಇರಲಿದೆ. ವಾಟ್ಸ್ಆ್ಯಪ್ ಮೇಲ್ಬಾಗದ ಬಲ ಮೂಲೆಯಲ್ಲಿ ಈ ಫಿಲ್ಟನ್ ಬಟನ್ ಇರಲಿದೆ ಎಂದು ಹೇಳಲಾಗಿದೆ.
ಈ ವೈಶಿಷ್ಟ್ಯದ ಮೂಲಕ ಬಳಕೆದಾರರು ಸೆಕೆಂಡುಗಳಲ್ಲಿ ಪ್ರಮುಖ ಚಾಟ್ಗಳನ್ನು ಪ್ರವೇಶಿಸಬಹುದು. ಆದರೆ, ಗ್ರೂಪ್ ಚಾಟ್ಗಳಿಗೆ ಇದು ಅನ್ವಯ ಆಗುವುದಿಲ್ಲ. ಇದಕ್ಕಾಗಿ ಯಾವುದೇ ಆಯ್ಕೆ ಕಂಡುಬಂದಿಲ್ಲ.