ಬೆಂಗಳೂರು:– ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಕೇಸ್ ಗೆ ಸಂಬಂಧಿಸಿದಂತೆ ಚೈತ್ರಾಗೆ ಕೊನೆಗೂ ಜಾಮೀನು ಮಂಜೂರು ಮಾಡಲಾಗಿದೆ.
ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಿದೆ. ವಂಚನೆ ಆರೋಪ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್ನಲ್ಲಿ ಚೈತ್ರಾ ಬಂಧನವಾಗಿತ್ತು.
ಬಳಿಕ ಚೈತ್ರಾ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಜೈಲು ಸೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಿಸಿಬಿಯು ಆರೋಪಿಗಳ ವಿರುದ್ಧ ಸುಮಾರು 800 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ಮೂಲಕ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ತನಿಖೆಯನ್ನು ಸಿಸಿಬಿ ಮುಕ್ತಾಯಗೊಳಿಸಿದೆ.