ಬೆಂಗಳೂರು :– ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಅಧಿಕಾರಿಗಳಿಗೆ ವಂಚಿಸಿದ ಆರೋಪದಡಿ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬೇಕರಿ ತಿಂಡಿ ಪ್ರಿಯರೇ ಹುಷಾರ್: ಖಾರಾ ಮಿಕ್ಚರ್, ಚಿಪ್ಸ್ ತಿಂತಿದ್ದೀರಾ!? ಪ್ರಾಣಕ್ಕೆ ಕಂಟಕ ಆಗ್ಬಹುದು ಜೋಕೆ!
ರಘುನಾಥ್ ಬಂಧಿತ ಆರೋಪಿ. ಆರೋಪಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ವರ್ಗಾವಣೆ ಮಾಡಿಸಿಕೊಡುವುದಾಗಿ ಆಮಿಷವೊಡ್ಡಿ ಹಣ ಪಡೆದು ವಂಚಿಸುತ್ತಿದ್ದ.
ಸಚಿವ ಪ್ರಿಯಾಂಕ್ ಖರ್ಗೆಯವರ ಹೆಸರನ್ನು ಹೇಳಿಕೊಂಡು ಇತ್ತೀಚೆಗೆ ರಘುನಾಥ್ ಇಂಜಿನಿಯರ್ ಒಬ್ಬರಿಗೆ ಕರೆ ಮಾಡಿದ್ದ. ಬಳಿಕ ವರ್ಗಾವಣೆ ಮಾಡಿಸಿಕೊಡುವುದಾಗಿ 2 ಲಕ್ಷ ರೂ. ಬೇಡಿಕೆ ಇಟ್ಟಿದ್ದ. ಇವನ ಮಾತನ್ನು ನಂಬಿದ್ದ ಇಂಜಿನಿಯರ್ 80 ಸಾವಿರ ರೂ. ಹಣ ಕೊಟ್ಟಿದ್ದರು. ಬಳಿಕ ಈತನ ವಂಚನೆ ಬಗ್ಗೆ ತಿಳಿದು ಸಚಿವರ ಆಪ್ತ ಕಾರ್ಯದರ್ಶಿಗಳು ದೂರು ನೀಡಿದ್ದರು. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ