ಬೆಂಗಳೂರು:– ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಶಿಕ್ಷೆ ನೀಡಿದೆ. 6 ಕೋಟಿ 96 ಲಕ್ಷದ 70 ಸಾವಿರ ರೂಪಾಯಿ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ ಅನುಭವಿಸಲು ಆದೇಶಿಸಿದೆ.
6 ಕೋಟಿ 96 ಲಕ್ಷದ 70 ಸಾವಿರ ರೂ. ದಂಡದ ಹಣದಲ್ಲಿ 6,96,60,000 ದೂರುದಾರರಿಗೆ ಪರಿಹಾರವಾಗಿ ನೀಡಬೇಕು. ಇನ್ನುಳಿದ 10 ಸಾವಿರ ರೂಪಾಯಿ ಸರ್ಕಾರಕ್ಕೆ ದಂಡವಾಗಿ ನೀಡಲು ಕೋರ್ಟ್ ಆದೇಶಿಸಿದೆ.
ಕೋರ್ಟ್ನಲ್ಲಿ ಕೇವಲ 50 ಲಕ್ಷ ರೂ. ನೀಡಿ ಉಳಿದ ಹಣ ಪಾವತಿಸಿರಲಿಲ್ಲ. ಜನವರಿ 30ರೊಳಗೆ 6.10 ಲಕ್ಷ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಆದ್ರೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುಚ್ಚಳಿಕೆ ಒಪ್ಪಲು ನಿರಾಕರಿಸಿದೆ. ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ. ಹೀಗಾಗಿ ಜಡ್ಜ್ ಜೆ.ಪ್ರೀತ್ ಅವರು ಮಧು ಬಂಗಾರಪ್ಪ ಮನವಿ ತಿರಸ್ಕರಿಸಿದ್ದಾರೆ.