ಬೆಂಗಳೂರು:- ಚೆಕ್ ಬೌನ್ಸ್ ಕೇಸ್ ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಸಚಿವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯಬೇಕು ಎಂದರು.
2011ರಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದೆ. ಮಧು ಬಂಗಾರಪ್ಪರವರು ತಮ್ಮ ಆಕಾಶ್ ಆಡಿಯೋ ಸಂಸ್ಥೆಯಿಂದ ರಾಜೇಶ್ ಎಕ್ಸ್ಪೋರ್ಟ್ ಸಂಸ್ಥೆಗೆ 6.96 ಕೋಟಿ ರು. ಸಂದಾಯ ಮಾಡಬೇಕಿತ್ತು. ಹಲವಾರು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಹಣವನ್ನು ಪಾವತಿಸಲು ಚೆಕ್ ನೀಡಿದ್ದು, ಅದು ಬೌನ್ಸ್ ಆಗಿತ್ತು. ಈಗ ನ್ಯಾಯಾಲಯವು ದಂಡ ಪಾವತಿಸುವಂತೆ ಸೂಚಿಸಿದೆ ಎಂದರು.
ಸದ್ಯಕ್ಕೆ 50 ಲಕ್ಷ ರು. ಪಾವತಿಸಿ ಉಳಿದ ಮೊತ್ತವನ್ನು ಜನವರಿ ಅಂತ್ಯದ ವೇಳೆಗೆ ಕೊಡುವುದಾಗಿ ಮಧು ಬಂಗಾರಪ್ಪ ಅವರು ಮುಚ್ಚಳಿಕೆ ಸಲ್ಲಿಸಿದ್ದರು. ಆದರೆ, ಹಿಂದಿನ ಮುಚ್ಚಳಿಕೆಯನ್ನು ಪಾಲಿಸದ ಕಾರಣ ಅವರ ಕೋರಿಕೆಯನ್ನು ನ್ಯಾಯಾಲಯ ಮನ್ನಿಸಿಲ್ಲ. ಚೆಕ್ ಬೌನ್ಸ್ ಮತ್ತು ಮುಚ್ಚಳಿಕೆ ಬರೆದುಕೊಟ್ಟರೂ ಅದನ್ನು ಪಾಲಿಸದ ಹಿನ್ನೆಲೆ ಇರುವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯಬೇಕು. ಶಿಕ್ಷಣ ಕ್ಷೇತ್ರಕ್ಕೆ ಕಳಂಕವಾಗುವಂತೆ ವರ್ತಿಸಿದ ಮಧು ಬಂಗಾರಪ್ಪ ಅವರು ಆ ಹುದ್ದೆಯಲ್ಲಿ ಮುಂದುವರೆಯುವುದು ಸೂಕ್ತವಲ್ಲ ಎಂದು ಹೇಳಿದರು.