ಬೆಂಗಳೂರು:- ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಚೆಕ್ ಬೌನ್ಸ್ ಕೇಸ್ ನಲ್ಲಿ ಮಾಜಿ ಬಿಜೆಪಿ ಶಾಸಕ ಸುನಿಲ್ ಹೆಗ್ಡೆಗೆ ಶಿಕ್ಷೆ ವಿಧಿಸಿದೆ.
60 ಲಕ್ಷದ 10 ಸಾವಿರ ರೂಪಾಯಿ ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜೆ.ಪ್ರೀತ್ ಅವರು ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ದಂಡ ಪಾವತಿಸದಿದ್ದರೆ 1 ವರ್ಷ ಸೆರೆವಾಸ ಅನುಭವಿಸಲು ಆದೇಶಿಸಿದೆ.
ಇನ್ನು ದಂಡದ ಹಣದಲ್ಲಿ 60 ಲಕ್ಷ ರೂಪಾಯಿ ಹಣ ದೂರುದಾರರಿಗೆ ಪರಿಹಾರವಾಗಿ ನೀಡಲು ಕೋರ್ಟ್ ಸೂಚಿಸಿದ್ದು, ಇನ್ನುಳಿದ 10 ಸಾವಿರ ರೂಪಾಯಿ ಸರ್ಕಾರಕ್ಕೆ ದಂಡವಾಗಿ ನೀಡಲು ಹೇಳಿದೆ.
ಇನ್ನೂ ಕಾಳಿ ಇಂಡೇನ್ ಗ್ಯಾಸ್ ಏಜೆನ್ಸಿ ನಡೆಸುತ್ತಿದ್ದ ಸುನಿಲ್ ಹೆಗ್ಡೆ, 40 ಲಕ್ಷ ರೂ. ಸಾಲ ಮರುಪಾವತಿಗೆ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ಸುಂದರೇಶ್ ಎಂಬುವರು ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು.