ಚೆನ್ನೈ:- ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಿಗೆ ಡಿಎಂಕೆ ಸರ್ಕಾರ ಬೆಂಬಲ ನೀಡಿದೆ ಎಂದು ಟೀಕಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.
1998 ರ ಕೊಯಮತ್ತೂರು ಬಾಂಬ್ ಸ್ಫೋಟದಲ್ಲಿ 58 ಜನರ ದುರಂತ ಸಾವಿಗೆ ಕಾರಣವಾದ ಭಯೋತ್ಪಾದಕನನ್ನು ವೈಭವೀಕರಿಸುವುದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಣ್ಣಾಮಲೈ ಮತ್ತು ಇತರ ಬಿಜೆಪಿ ನಾಯಕರನ್ನು ಬಂಧಿಸಲಾಗಿದೆ.
ಬಾಂಬ್ ಸ್ಫೋಟದ ಮಾಸ್ಟರ್ಮೈಂಡ್ ಎಸ್ಎ ಬಾಷಾ ಅನಾರೋಗ್ಯದ ಹಿನ್ನೆಲೆ ಪೆರೋಲ್ನಲ್ಲಿ ಬಿಡುಗಡೆಯಾಗಿದ್ದ. ನಂತರ ಡಿ.17 ರಂದು ಮೃತಪಟ್ಟ. ಬಾಷಾ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದ. ಆದರೆ, ಪೆರೋಲ್ ಮೇಲೆ ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೊನೆಯುಸಿರೆಳೆದಿದ್ದಾನೆ.
ಮೃತರಿಗೆ ಸಂತಾಪ ಸೂಚಿಸಲು ಸಾವಿರಾರು ಜನರು ಆಗಮಿಸಿದ್ದರು. ಭಾರಿ ಪೊಲೀಸ್ ಭದ್ರತೆಯ ನಡುವೆ ಶವಯಾತ್ರೆಯಲ್ಲಿ ಪಾಲ್ಗೊಂಡರು. 58 ಜನರ ಸಾವಿಗೆ ಕಾರಣನಾದ ಅಪರಾಧಿ ಭಯೋತ್ಪಾದಕನ ಶವಯಾತ್ರೆಗೆ ಅನುಮತಿ ನೀಡಿದ್ದಕ್ಕಾಗಿ ಡಿಎಂಕೆ ಸರ್ಕಾರವನ್ನು ಬಿಜೆಪಿ ಗುರಿಯಾಗಿಸಿಕೊಂಡಿದೆ.