ಚೆನ್ನೈ:ತವರಲ್ಲಿ ವಿಶ್ವ ಚೆಸ್ ಚಾಂಪಿಯನ್ ಗುಕೇಶ್ಗೆ ಭರ್ಜರಿ ಸ್ವಾಗತ ಕೋರಲಾಗಿದೆ.
ವಿಶ್ವ ಚೆಸ್ ಚಾಂಪಿಯನ್ ಹೆಗ್ಗಳಿಕೆಗೆ ಪಾತ್ರರಾದ ಡಿ.ಗುಕೇಶ್ ಭಾರತಕ್ಕೆ ಮರಳಿದ್ದು, ಚೆನ್ನೈ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಸಿಕ್ಕಿತು.
ವಿಶ್ವ ಚೆಸ್ ಚಾಂಪಿಯನ್ಶಿಪ್ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ವಿಶ್ವದ ಕಿರಿಯ ಚೆಸ್ ಚಾಂಪಿಯನ್ ಎಂಬ ಇತಿಹಾಸ ನಿರ್ಮಿಸಿದರು.
ಚೆನ್ನೈ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಅಭಿಮಾನಿಗಳು, ಸ್ನೇಹಿತರು ಸೇರಿದಂತೆ ಅಧಿಕಾರಿಗಳು ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಾಧನೆಯ ಬಳಿಕ ಮರಳಿ ಭಾರತಕ್ಕೆ ಬಂದಿರುವುದು ನನಗೆ ತುಂಬಾ ಸಂತೋಷವನ್ನುಂಟು ಮಾಡಿದೆ. ನನಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು. ನಿಮ್ಮ ಬೆಂಬಲವೇ ನನಗೆ ಹೆಚ್ಚಿನ ಶಕ್ತಿ ನೀಡಿತ್ತು ಎಂದು ಸಂತೋಷ ವ್ಯಕ್ತಪಡಿಸಿದರು.