ಇಂಡಿಯರ್ ಪ್ರೀಮಿಯರ್ ಲೀಗ್ ನಲ್ಲಿ 2024 ರಲ್ಲಿ ತನ್ನ ಎರಡನೇ ಪಂದ್ಯ ಆಡಿದ ಚೆನ್ನೈ ಸೂಪರ್ ಕಿಂಗ್ಸ್ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಗುಜರಾತ್ ತಂಡವನ್ನು ಹೀನಾಯವಾಗಿ ಸೋಲಿಸಿದೆ.
ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡಕ್ಕೆ ರಚಿನ್ ರವೀಂದ್ರ ಹಾಗೂ ರುತುರಾಜ್ ಗಾಯಕ್ವಾಡ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 62 ರನ್ ಪೇರಿಸಿದ ಬಳಿಕ ರಚಿನ್ (46 ರನ್ಸ್, 20ಎಸೆತ) ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಅಜಿಂಕ್ಯ ರಹಾನೆ (12) ಕೂಡ ಔಟಾದರು.
ಮತ್ತಷ್ಟು ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ – ಇಲ್ಲಿದೆ ಇವತ್ತಿನ ದರಪಟ್ಟಿ
ಈ ಹಂತದಲ್ಲಿ ಶಿವಂ ದುಬೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 23 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 51 ರನ್ ಚಚ್ಚಿದರು. ಮತ್ತೊಂದೆಡೆ ರುತುರಾಜ್ ಗಾಯಕ್ವಾಡ್ 46 ರನ್ಗಳ ಕೊಡುಗೆ ನೀಡಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಸಿಎಸ್ಕೆ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು.
207 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ಶುಭ್ಮನ್ ಗಿಲ್ ಕೇವಲ 8 ರನ್ಗಳಿಸಿ ಔಟಾದರೆ, ವೃದ್ದಿಮಾನ್ ಸಾಹ 21 ರನ್ಗಳಿಸಿ ವಿಕೆಟ್ ಒಪ್ಪಿಸಿದರು.
ಇನ್ನು ವಿಜಯ್ ಶಂಕರ್ 12 ರನ್ಗಳಿಸಿ ನಿರ್ಗಮಿಸಿದರೆ, ಡೇವಿಡ್ ಮಿಲ್ಲರ್ 21 ರನ್ಗಳಿಸಿ ಹೊರ ನಡೆದರು