ಬಾಲಿವುಡ್ ನಟ ವಿಕ್ಕಿ ಕೌಶಲ್ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ಛಾವಾ ಚಿತ್ರ ಬಾಕ್ಸಾಫೀಸ್ ನಲ್ಲಿ ತನ್ನ ನಾಗಾಲೋಟ ಮುಂದುವರೆಸಿದ್ದು, ಬಿಡುಗಡೆಯಾದ ದಿನದಿಂದಲೇ ಚಿತ್ರ ಭರ್ಜರಿ ಕಲೆಕ್ಷನೆ ಮಾಡುತ್ತಿದೆ. ಐತಿಹಾಸಿಕ ಕಥಾಹಂದರ ಹೊಂದಿರುವ ಈ ಚಿತ್ರದ ಬಗ್ಗೆ ಆರಂಭದಲ್ಲಿ ದೊಡ್ಡ ಕ್ರೇಜ್ ಇರಲಿಲ್ಲ. ಆದರೆ ರಿಲೀಸ್ ಬಳಿಕ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದರಿಂದ ಕಲೆಕ್ಷನ್ ಹೆಚ್ಚುತ್ತಾ ಹೋಯಿತು.
‘ಛಾವ’ ಸಿನಿಮಾಗೆ ಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಸಿಗುತ್ತಿದ್ದು, ದಿನದಿಂದ ದಿನಕ್ಕೆ ಕಲೆಕ್ಷನ್ ಹೆಚ್ಚಾಗುತ್ತಿದೆ. ಈಗ ಈ ಸಿನಿಮಾದ ಕಲೆಕ್ಷನ್ 200 ಕೋಟಿ ರೂಪಾಯಿ ಸನಿಹದಲ್ಲಿದೆ.
ಲಕ್ಷ್ಮಣ್ ಉಟೇಕರ್ ಅವರು ನಿರ್ದೇಶನ ಮಾಡಿದ ‘ಛಾವ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಅವರು ಛತ್ರಪತಿ ಶಂಭಾಜಿ ಮಹಾರಾಜ್ ಪಾತ್ರವನ್ನು ಮಾಡಿದ್ದಾರೆ. ಮಹಾರಾಣಿ ಯೇಸುಬಾಯಿ ಪಾತ್ರಕ್ಕೆ ರಶ್ಮಿಕಾ ಮಂದಣ್ಣ ಅವರು ಬಣ್ಣ ಹಚ್ಚಿದ್ದಾರೆ. ಔರಂಗ್ಜೇಬ್ ಪಾತ್ರದಲ್ಲಿ ಅಕ್ಷಯ್ ಖನ್ನಾ ಅವರು ಕಾಣಿಸಿಕೊಂಡಿದ್ದಾರೆ. ಐತಿಹಾಸಿಕ ಕಥಾಹಂದರ ಹೊಂದಿರುವ ಈ ಸಿನಿಮಾಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ.
Turmeric Milk: ಈ ಸಮಸ್ಯೆಗಳಿದ್ದರೆ ತಪ್ಪಿಯೂ ಅರಿಶಿನ ಮಿಶ್ರಿತ ಹಾಲನ್ನು ಕುಡಿಯಬೇಡಿ!
ಮೊದಲ ದಿನ (ಫೆ.14) ‘ಛಾವ’ ಸಿನಿಮಾಗೆ 33.10 ಕೋಟಿ ರೂಪಾಯಿ ಕಮಾಯಿ ಆಗಿತ್ತು. 2ನೇ ದಿನ 39.30 ಕೋಟಿ ರೂಪಾಯಿ, 3ನೇ ದಿನ 49.03 ಕೋಟಿ ರೂಪಾಯಿ, 4ನೇ ದಿನ 24.10 ಕೋಟಿ ರೂಪಾಯಿ ಹಾಗೂ 5ನೇ ದಿನ 25.75 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. 6ನೇ ದಿನ ಕೂಡ ಅನೇಕ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿದೆ. 6 ದಿನಕ್ಕೆ ಸಿನಿಮಾದ ಕಲೆಕ್ಷನ್ 200 ಕೋಟಿ ರೂಪಾಯಿ ಸನಿಹದಲ್ಲಿ ಇರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.
‘ಛಾವ’ ಸಿನಿಮಾದಲ್ಲಿ ಛತ್ರಪತಿ ಶಂಭಾಜಿ ಮಹಾರಾಜ್ ಜೀವನದ ಕಥೆ ಇದೆ. ಆ ಪಾತ್ರವನ್ನು ವಿಕ್ಕಿ ಕೌಶಲ್ ಅವರು ನಿಭಾಯಿಸಿದ್ದಾರೆ. ಶಂಭಾಜಿ ಪತ್ನಿ ಯೇಸುಬಾಯಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ಅವರು ನಟಿಸಿದ್ದಾರೆ. ಲಕ್ಷ್ಮಣ್ ಉಟೇಕರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಮೆಡಾಕ್ ಫಿಲ್ಮ್ಸ್’ ಮೂಲಕ ಈ ಚಿತ್ರ ನಿರ್ಮಾಣ ಆಗಿದ್ದು, ನಿರ್ಮಾಪಕರಿಗೆ ಭರ್ಜರಿ ಲಾಭ ತಂದುಕೊಟ್ಟಿದೆ. ‘ಛಾವ’ ಚಿತ್ರದಿಂದಾಗಿ ವಿಕ್ಕಿ ಕೌಶಲ್ ಅವರ ಚಾರ್ಮ್ ಹೆಚ್ಚಾಗಿದೆ.