ಹುಬ್ಬಳ್ಳಿ: ರಾಜ್ಯದಲ್ಲಿ ಮೀತಿ ಮೀರಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಪೇ ಡಬಲ್ ಸಿಎಂ ಸಿದ್ಧರಾಮಯ್ಯಾ ಆಗಿದ್ದಾರೆ ಎಂದು ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಅಧಿಕಾರದಲ್ಲಿದ್ದಾಗ ನಮಗೆ 40 ಪರ್ಸೇಂಟ್ ಸರ್ಕಾರ ಅಂತಾ ಹೇಳುತ್ತಾ ಇದ್ದರು. ಆದರೀಗ 40 ಶೇಕಡಾ ಅಲ್ಲಾ ಪೇ ಡಬಲ್ ಪೇಮೆಂಟ್ ಸಿಎಂ ಆಗಿದೆ. ಅಬಕಾರಿ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಮಂತ್ರಿಗಳಿಗೆ ಒಂದು ಪಾಲು, ಸಿಎಂಗೆ ಒಂದು ಪಾಲು ಪೇಮೆಂಟ್ ಹೋಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಪಿಯುಸಿ ಪಾಸ್ ಆದವರಿಗೆ ಗುಡ್ ನ್ಯೂಸ್: ಕರ್ನಾಟಕ ಲೋಕಾಯುಕ್ತದಲ್ಲಿದೆ ಭರ್ಜರಿ ಉದ್ಯೋಗಾವಕಾಶ – ಇಂದೇ ಅರ್ಜಿ ಸಲ್ಲಿಸಿ
ಶಿಗ್ಗಾವಿ-ಸವಣೂರು ಕ್ಷೇತ್ರದಲ್ಲಿ ಅಭಿವೃದ್ಧಿಯೇ ಆಗಿಲ್ಲ ಎಂದು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಶಿಗ್ಗಾವಿ ಕ್ಷೇತ್ರದ ಅಭಿವೃದ್ಧಿಯನ್ನು ಜನ ಅನುಭವಿಸಿದ್ದಾರೆ. ಕಾಂಗ್ರೆಸ್ನವರ ಆಲೋಚನೆಗಳಿಗೂ ಶಿಗ್ಗಾವಿ ಜನರ ಆಲೋಚನೆಗಳಿಗೂ ಬಹಳ ವ್ಯತ್ಯಾಸವಿದೆ. ಸರ್ಕಾರ ಅವರದೇ ಇದೆ. ಶಿಗ್ಗಾವಿಯಲ್ಲಿ ತಾಲೂಕು ಮಟ್ಟದಲ್ಲಿ 200 ಬೆಡ್ ಆಸ್ಪತ್ರೆ, ಟೆಕ್ಸ್ ಟೈಲ್ ಪಾರ್ಕ್ , ಸವಣೂರಿನಲ್ಲಿ ಆಯುರ್ವೆದಿಕ್ ಕಾಲೇಜ್, ಐಟಿಐ ಕಾಲೇಜ್,
ಪ್ರವಾಹ ಸಂದರ್ಭದಲ್ಲಿ 12,000ಕ್ಕಿಂತ ಹೆಚ್ಚು ಮನೆ ನಿರ್ಮಾಣ, ಬೆಂಗಳೂರಿಗಿಂತ ಒಳ್ಳೆಯ ರಸ್ತೆ ಶಿಗ್ಗಾವಿಯಲ್ಲಿವೆ. ಸಿಎಂ ಕಾರ್ನಲ್ಲಿ ಹೋಗುವಾಗ ನಿದ್ದೆ ಮಾಡುತ್ತಿರುತ್ತಾರೋ ಏನೋ ಗೊತ್ತಿಲ್ಲ ಎಂದು ಹರಿಹಾಯ್ದರು. ಕಾಗಿನೆಲೆ ಗುರು ಪೀಠದ ಸ್ವಾಮೀಜಿ ಬಗ್ಗೆ ಒಬ್ಬ ಮುಖ್ಯಮಂತ್ರಿಯಾಗಿ ಗುರುಗಳಿಗೆ ದಾಷ್ಟ್ಯದ ಮಾತು ಹೇಳುವುದು ಅವರಿಗೆ ಅವಮಾನ ಮಾಡಿದಂತೆ, ಅವರು ನಮ್ಮ ಗುರುಗಳು. ಅವರ ನಮ್ಮ ನಡುವೆ ಗುರು ಭಕ್ತರ ಸಂಬಂಧವಿದೆ. ಚುನಾವಣೆ ಸೋಲಿನ ಭಯದಲ್ಲಿ ಸಿಎಂ ಸ್ವಾಮೀಜಿ ಎಳೆ ತರುವ ಪ್ರಯತ್ನ ಮಾಡಿದ್ದಾರೆ ಎಂದರು.