ನೆಲಮಂಗಲ: ಐರನ್ ಮಾತ್ರೆ ಸೇವಿಸಿ ಮಕ್ಕಳು ಅಸ್ವಸ್ಥರಾದ ಘಟನೆ ನೆಲಮಂಗಲ ನಗರದ ಕೋಟೆಬೀದಿ ಸರ್ಕಾರಿ ಶಾಲೆಯಲ್ಲಿ ಜರುಗಿದೆ.
ಇಂದು ಬೆಳಗ್ಗೆ ಶಾಲೆಯಲ್ಲಿ ಎಲ್ಲಾ ಮಕ್ಕಳಿಗೆ ಐರನ್ ಮಾತ್ರೆ ನೀಡಲಾಗಿತ್ತು. ಬಳಿಕ ಮಕ್ಕಳು ಅಸ್ವಸ್ಥರಾಗಿದ್ದಾರೆ. ಕೂಡಲೇ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನೂ ಶಿಕ್ಷಕರ ನಿರ್ಲಕ್ಷ್ಯ ವಿರುದ್ಧ ಮಕ್ಕಳ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೂವರು ಮಕ್ಕಳು ದಾಖಲಾಗಿದ್ದಾರೆ.
ವಿಪರೀತವಾದ ವಾಂತಿಯಿಂದ ಮಕ್ಕಳು ನರಳುತ್ತಿದ್ದಾರೆ. ಶಾಲೆಯಲ್ಲಿ ಮಕ್ಕಳಿಗೆ ಒಂದು ಮಾತ್ರೆ ನೀಡಲಾಗಿತ್ತು. ಕೆಲ ಮಕ್ಕಳು ಹೆಚ್ಚು ಮಾತ್ರೆ ಸೇವಿಸಿ ಅಸ್ವಸ್ಥ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ಕೊಡಲಾಗುತ್ತಿದೆ.