ನವದೆಹಲಿ:-INDIA:ಚೀನಾದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ ವೇಗವಾಗಿ ಹರಡುತ್ತಿದೆ. ಈ HMPV ವೈರಸ್ ಈಗ ಹಲವು ದೇಶಗಳಲ್ಲಿ ಹರಡಲು ಪ್ರಾರಂಭಿಸಿದೆ. ಈ ವೈರಸ್ ಎಷ್ಟು ಅಪಾಯಕಾರಿ ಎಂಬುದರ ಕುರಿತು ಸಂಶೋಧನೆಗಳು ನಡೆಯುತ್ತಿವೆ. ಇದರಿಂದ ಭಾರತ ಸೇರಿದಂತೆ ಹಲವು ದೇಶಗಳು ಅಲರ್ಟ್ ಮೋಡ್ನಲ್ಲಿವೆ.
60% ಕಮೀಷನ್ ಆರೋಪ: ದಾಖಲೆ ಕೇಳಿದ ಸಿದ್ದರಾಮಯ್ಯಗೆ ಹೆಚ್ಡಿಕೆ ಕೊಟ್ಟ ಉತ್ತರ ಏನು?
ಅದರಂತೆ ಭಾರತದಲ್ಲಿ HMPV ವೈರಸ್ ಆರ್ಭಟ ಜೋರಾಗಿದೆ. ಇಂದು ಬೆಳಗ್ಗೆ ಕರ್ನಾಟಕದ ಬೆಂಗಳೂರಿನಲ್ಲಿ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದ 3 ಮತ್ತು 8 ತಿಂಗಳ ಎರಡು ಮಕ್ಕಳಲ್ಲಿ ಈ ವೈರಸ್ ದೃಢಪಟ್ಟಿತ್ತು. ಬಳಿಕ, ಗುಜರಾತ್ನ ಅಹಮದಾಬಾದ್ನಲ್ಲಿ 2 ವರ್ಷದ ಮಗುವಿಗೆ ಎಚ್ಎಂಪಿವಿ ತಗುಲಿರುವುದು ಪತ್ತೆಯಾಗಿತ್ತು. ಹಾಗೇ, ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ 5 ತಿಂಗಳ ಮಗುವಿನಲ್ಲೂ ಈ ವೈರಸ್ ಪತ್ತೆಯಾಗಿದೆ. ಬಳಿಕ ಇದೀಗ ತಮಿಳುನಾಡಿನ ಚೆನ್ನೈನಲ್ಲಿ ಇಬ್ಬರು ಮಕ್ಕಳಲ್ಲಿ ಎಚ್ಎಂಪಿವಿ ಸೋಂಕು ದೃಢಪಟ್ಟಿದೆ.
ಬೆಂಗಳೂರು, ಅಹಮದಾಬಾದ್, ಕೊಲ್ಕತ್ತಾ, ಚೆನ್ನೈನಲ್ಲಿ HMPV ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ನಿಂದ ಎಚ್ಚರಿಕೆ ನೀಡಲಾಗಿದೆ. ಭಾರತ ಸೇರಿದಂತೆ ವಿಶ್ವದ ಹಲವೆಡೆ ಹೆಚ್ಎಂಪಿ ವೈರಸ್ ಹರಡುತ್ತಿದೆ. ಉಸಿರಾಟದ ಸಂಬಂಧ ರೋಗ ನಿಭಾಯಿಸಲು ಭಾರತ ಸುಸಜ್ಜಿತವಾಗಿದೆ. ಬೆಂಗಳೂರಲ್ಲಿ 2 HMPV ಕೇಸ್ ಪತ್ತೆಯಾಗುತ್ತಿದ್ದಂತೆ ICMR ಪ್ರಕಟಣೆ ಹೊರಡಿಸಿದೆ.
ಭಾರತದಲ್ಲಿ ಇದುವರೆಗೆ ಮಕ್ಕಳಲ್ಲಿ 6 HMPV ವೈರಸ್ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಎರಡು ಮತ್ತು ಅಹಮದಾಬಾದ್ನಲ್ಲಿ ಒಂದು, ಕೊಲ್ಕತ್ತಾದಲ್ಲಿ 1 ಹಾಗೂ ಚೆನ್ನೈನಲ್ಲಿ 2 ಪ್ರಕರಣ ವರದಿಯಾಗಿದೆ. ಈ ಹಿಂದೆ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಬಹು ಉಸಿರಾಟದ ವೈರಲ್ ರೋಗಕಾರಕಗಳ ಸಾಮಾನ್ಯ ಕಣ್ಗಾವಲು ಮೂಲಕ ಕರ್ನಾಟಕದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ ನ ಎರಡು ಪ್ರಕರಣಗಳನ್ನು ಪತ್ತೆಹಚ್ಚಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ದೃಢಪಡಿಸಿತ್ತು.
ಅದಾದ ಬಳಿಕ 3 ರಾಜ್ಯಗಳಲ್ಲಿ HMVP ವೈರಸ್ ಪತ್ತೆಯಾಗಿದೆ. ಕರ್ನಾಟಕದ ಬೆಂಗಳೂರಿನಲ್ಲಿ ಎರಡು HMPV ಪ್ರಕರಣಗಳು ದೃಢಪಟ್ಟ ಕೆಲವೇ ಗಂಟೆಗಳ ನಂತರ, ಗುಜರಾತ್ನ ಅಹಮದಾಬಾದ್ನಲ್ಲಿ ಮೂರನೇ ಶಂಕಿತ ವೈರಸ್ ಪ್ರಕರಣ ಪತ್ತೆಯಾಗಿತ್ತು. ಬಳಿಕ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಹಾಗೂ ತಮಿಳುನಾಡಿನ ಚೆನ್ನೈನಲ್ಲಿ ಎಚ್ಎಂಪಿವಿ ಪತ್ತೆಯಾಗಿದೆ.