ಚಿತ್ರದುರ್ಗ:- ಇಲ್ಲಿನ ಗುಯಿಲಾಳು ಟೋಲ್ ಬಳಿ ಅವಘಡ ಒಂದು ಸಂಭವಿಸಿದೆ. ಟೈಯರ್ ಬ್ಲಾಸ್ಟ್ ಆಗಿ ಇಡೀ ಬಸ್ ಧಗಧಗನೆ ಹೊತ್ತಿ ಉರಿದಿದೆ.
ಬಸ್ ಬೆಂಗಳೂರಿಗೆ ಹೋಗುತ್ತಿದ್ದ ಮಾರ್ಗ ಮಧ್ಯದಲ್ಲಿ ಅವಘಡ ಸಂಭವಿಸಿದೆ. ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.