ಚಿತ್ರದುರ್ಗ: ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಬೆಲೆ ಏರಿಕೆ ಖಂಡಿಸಿ ಬಿಜೆಪಿ ರೈತ ಮೋರ್ಚಾವು, ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ವೃತ್ತದ ಬಳಿ ಜಾನುವಾರುಗಳ ಸಮೇತ, ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ರೈತ ಮೋರ್ಚಾದ ಜಿಲ್ಲಾಧ್ಯಕ್ಷ ವೆಂಕಟೇಶ್ ಯಾದವ್ ಅವರ ನೇತೃತ್ವದಲ್ಲಿ ನಡೆಸಲಾಯಿತು. ಬೀಜಬರಸಗೊಬ್ಬರಗಳ ಬೆಲೆಯನ್ನು ಕೂಡಲೇ ಇಳಿಸಬೇಕು ಎಂದು ಒತ್ತಾಯಿಸಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕುವ ಮೂಲಕ ಆಕ್ರೋಶ ಹೊರ ಹಾಕಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)