ಫಸ್ಟ್ ಲುಕ್ ನಿಂದಾಗಿ ಸಖತ್ ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿರುವ ತಂಗಲಾನ್ (Tangalan) ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇದೇ ಏಪ್ರಿಲ್ ನಲ್ಲಿ ತಮ್ಮ ಚಿತ್ರವನ್ನು ವಿಶ್ವದಾದ್ಯಂತ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಚಿಯಾನ್ ವಿಕ್ರಮ್ (Vikram) ಹಾಗೂ ಪ.ರಂಜಿತ್ (Pa. Ranjith)ಕಾಂಬಿನೇಷನ್ ಚಿತ್ರವಿದು.
ರಜನಿಕಾಂತ್ ಅಭಿನಯದ ಕಬಾಲಿ, ಕಾಲ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ಪ. ರಂಜಿತ್ ಈ ಬಾರಿ ಕೋಲಾರ ಗೋಲ್ಡ್ ಫೀಲ್ಡ್ ಹಿನ್ನೆಲೆಯ ಕಥೆಯನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರೆ.
ಈ ಚಿತ್ರದಲ್ಲಿ ವಿಕ್ರಮ್ ಜೊತೆಗೆ ಪಾರ್ವತಿ, ಮಾಳವಿಕಾ ಮೋಹನನ್, ಪಶುಪತಿ, ಹರಿಕೃಷ್ಣನ್, ಅನ್ಬುದುರೈ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಇದೆ. ಈ ಚಿತ್ರಕ್ಕೆ ಎ. ಕಿಶೋರ್ ಛಾಯಾಗ್ರಹಣ ಮಾಡುತ್ತಿದ್ದು, ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ಸಂಯೋಜಿಸುತ್ತಿದ್ದಾರೆ. ಪ. ರಂಜಿತ್ ಅವರೇ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದಿದ್ದು ಅವರಿಗೆ ಬರವಣಿಗೆಯಲ್ಲಿ ತಮಿಳ್ ಪ್ರಭಾ ಸಹಾಯ ಮಾಡಿದ್ದಾರೆ. ಎಸ್.ಎಸ್. ಮೂರ್ತಿ ಕಲಾನಿರ್ದೇಶನ ಮತ್ತು ಆರ್.ಕೆ. ಸೆಲ್ವಾ ಅವರ ಸಂಕಲನವಿದೆ.