ಬೆಂಗಳೂರು: ನಮ್ಮ ಮೆಟ್ರೋ ಅದೆಷ್ಟೇ ಡೆವೆಲಪ್ ಆದ್ರೂ ಒಂದಲ್ಲಾ ಒಂದು ವಿವಾದಕ್ಕೀಡಾಗುತ್ತಿರುತ್ತೆ.. ಅದರಂತೆ ಇದೀಗ ನಮ್ಮ ಮೆಟ್ರೋನಲ್ಲಿ ಕ್ಯೂ ಆರ್ ಕೋಡ್ ರಹಸ್ಯ ಎಲ್ಲೆಡೆ ಸದ್ದಾಗುತ್ತಿದೆ.. ಮೆಟ್ರೋ ಅಧಿಕಾರಿಗಳಿಗೆ ಈ ಕ್ಯೂ ಆರ್ ಕೋಡ್ ತಲೆನೋವಾಗಿ ಎದುರಾಗಿದೆ.. ಅದೇನಪ್ಪ ಕ್ಯೂ ಆರ್ ಕೋಡ್ ಸುದ್ದಿ ಅಂತೀರಾ ಹಾಗಿದ್ದರೆ ಇಲ್ಲಿ ನೋಡಿ.. ನಮ್ಮ ಮೆಟ್ರೋ ರೈಲು ನಿಲ್ದಾಣಗಳಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮದ ಅನುಮತಿ ಪಡೆಯದೇ ಅಸಾಂಪ್ರದಾಯಿಕ ಮಾರ್ಕೆಟಿಂಗ್ ಕೃತ್ಯ ಎಸಗಿದ ವ್ಯಕ್ತಿಯೊಬ್ಬರನ್ನು ಬಂಧಿಸಿದ ಘಟನೆ ನಡೆದಿದೆ.
ಹೌದು, ಬೆಂಗಳೂರು ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ವ್ಯಕ್ತಿಯೊಬ್ಬರು ಅಸಾಂಪ್ರದಾಯಿಕ ಮಾರ್ಕೇಟಿಂಗ್ ಕೃತ್ಯ ಎಸಗಿದ್ದಾರೆ.ಸ್ಟಾರ್ಟ್-ಅಪ್ ಉದ್ಯೋಗಿಯೊಬ್ಬರು ತಮ್ಮ ಚಾಕೊಲೇಟ್ ಉತ್ಪನ್ನಗಳನ್ನು ಮಾರಾಟ ಮಾಡುವ ಉದ್ದೇಶದಿಂದಾಗಿ ನಗರದಾದ್ಯಂತ ಮೆಟ್ರೋ ವಾಶ್ರೂಮ್ಗಳಲ್ಲಿ ಕ್ಯೂಆರ್ ಕೋಡ್ಗಳನ್ನು ಅಂಟಿಸಿರುತ್ತಿರುವಾಗ ಸಿಕ್ಕಿಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಏಪ್ರಿಲ್ 23 ರಂದು ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಅಂಟಿಸುವಾಗ ಸಿಕ್ಕಿಬಿದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಗರದಾದ್ಯಂತ ಇರುವ ನಮ್ಮ ಮೆಟ್ರೋ ನಿಲ್ದಾಣಗಳ ವಾಶ್ ರೂಂನಲ್ಲಿ ಅರುಣ್ ಕ್ಯೂಆರ್ ಕೋಡ್ ಸ್ಟಿಕ್ಕರ್ಗಳನ್ನು ಅಂಟಿಸಿದ್ದಾರೆ. ನಿಮ್ಮ ಪ್ರೀತಿಪಾತ್ರರನ್ನು ಡಿಜಿರ್ನೊಂದಿಗೆ ಆಕರ್ಷಿಸಿ. ನನ್ನನ್ನು ಸ್ಕ್ಯಾನ್ ಮಾಡಿ ಎಂದು ಟ್ಯಾಗ್ಲೈನ್ ನೀಡಲಾಗಿದೆ.
Raw banana: ಸಿಹಿಯಾದ ಬಾಳೆಹಣ್ಣು ಮಾತ್ರವಲ್ಲ ಬಾಳೆಕಾಯಿ ಕೂಡ ಆರೋಗ್ಯಕ್ಕೆ ಉತ್ತಮ!
31 ವರ್ಷ ಉದ್ಯಮಿ ಅರುಣ್ ತಲಘಟ್ಟಪುರ ನಿವಾಸಿ. ಚಾಕೊಲೇಟ್ ಉತ್ಪನ್ನಗಳ ಮಾರಾಟಕ್ಕಾಗಿ ಗೆರಿಲ್ಲಾ ಮಾರ್ಕೆಟಿಂಗ್ ತಂತ್ರವನ್ನು ಅನುಸರಿಸಿದ್ದಾರೆ. ಗೆರಿಲ್ಲಾ ಮಾರ್ಕೆಟಿಂಗ್ ಎನ್ನುವುದು ಸಾಕಷ್ಟು ಕಂಪನಿಗಳು ಬಳಸುವ ಅಸಾಂಪ್ರದಾಯಿಕ ಮಾರ್ಕೆಟಿಂಗ್ ವಿಧಾನಗಳಲ್ಲಿ ಒಂದು. ಆದರೆ ಈ ಗೆರಿಲ್ಲಾ ಮಾರ್ಕೆಟಿಂಗ್ ಕಾನೂನುಬಾಹಿರವಾಗಿದೆ ಎಂಬುವುದನ್ನು ತಿಳಿಯದೆ ಈ ರೀತಿಯಾಗಿ ಮಾಡಿರುವುದಾಗಿ ಅರುಣ್ ವಿಚಾರಣೆ ವೇಳೆ ಹೇಳಿಕೊಂಡಿರುವುದಾಗಿ ವರದಿ ಆಗಿದೆ.ಮಧ್ಯಾಹ್ನ 2.45 ರ ಸುಮಾರಿಗೆ ಸ್ಟೇಷನ್ನ ವಾಶ್ರೂಮ್ನಲ್ಲಿ ಸ್ಟಿಕ್ಕರ್ಗಳನ್ನು ಅಂಟಿಸುವಾಗ ಅರುಣ್ ಸಿಕ್ಕಿಬಿದ್ದಿದ್ದಾರೆ.
ಅಷ್ಟೇ ಅಲ್ಲದೆ QR ಕೋಡ್ ಅನ್ನು ಸ್ಕ್ಯಾನ್ ಮಾಡುವುದರೊಂದಿಗೆ ಜನರು ಅಥವಾ ಗ್ರಾಹಕರು ಡೈಜ್ ಕಪಲ್ ಚಾಕೊಲೆಟ್ ಅನ್ನು ಹೇಗೆ ಖರೀದಿಸುತ್ತಾರೆ ಎಂಬುದನ್ನು ಸಹ ಅವರು ತೋರಿಸಿರುವುದಾಗಿ ಹೇಳಿಕೊಂಡಿದ್ದಾರೆ. ಮೆಟ್ರೋ ಆವರಣದಲ್ಲಿ ಯಾವುದೇ ಜಾಹೀರಾತಿಗೆ ಸಂಬಂಧಪಟ್ಟಂತೆ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯಬೇಕು. ಜಾಹೀರಾತುದಾರರು ಮೆಟ್ರೋ ಸಂಸ್ಥೆಗೆ ಪಾವತಿಸುವುದರೊಂದಿಗೆ ಕೆಲವು ಕಾರ್ಯವಿಧಾನಗಳನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ. ಸದ್ಯ ಆಸ್ತಿ ನಷ್ಟ ತಡೆ ಕಾಯ್ದೆ, ಕರ್ನಾಟಕ ತೆರೆದ ಸ್ಥಳಗಳ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 427 ಅಡಿಯಲ್ಲಿ ಅರುಣ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.. ಒಟ್ಟಾರೆ, ಮೆಟ್ರೋಪಾಲಿಟನ್ ಸಿಟಿಯಲ್ಲಿ ಮೆಟ್ರೋ ಗೆ ಸಂಬಂಧಿಸಿದಂತೆ ಹಲವಾರು ವಿಚಾರಗಳು ಅಧಿಕಾರಿಗಳ ತಲೆ ಕೊಡುವಂತೆ ಮಾಡಿದೆ. ಇದನ್ನು ಹೇಗೆ ಸರಿಪಡಿಸುತ್ತಾರೆ ಎಂದು ಕಾದು ನೋಡಬೇಕಿದೆ..