ಟಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ವರ್ಮಾ ಅವರಿಗೆ ಮುಂಬೈನ ಸ್ಥಳೀಯ ಕೋರ್ಟ್ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಮಂಗಳವಾರ (ಜವನವರಿ 21) ತೀರ್ಪು ಇದ್ದಿದ್ದರಿಂದ ರಾಮ್ ಗೋಪಾಲ್ ವರ್ಮಾ ಕೋರ್ಟ್ಗೆ ಹಾಜರಿ ಹಾಕಬೇಕಿತ್ತು. ಆದರೆ, ರಾಮ್ ಗೋಪಾಲ್ ವರ್ಮಾ ಕೋರ್ಟ್ಗೆ ಬರಲೇ ಇಲ್ಲ. ಹೀಗಾಗಿ, ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ.
ಟಾಲಿವುಡ್ ನಲ್ಲಿ ಸೂಪರ್ ಹಿಟ್ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ವರ್ಮಾ ಇತ್ತೀಚೆಗೆ ತಮ್ಮ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಹೆಚ್ಚು ಹೆಚ್ಚು ಸುದ್ದಿಯಾಗ್ತಿದ್ದಾರೆ. ಸದಾ ಒಂದಲ್ಲಾ ಒಂದು ವಿವಾದಗಳ ಮೂಲಕ ಸುದ್ದಿ ಆಗುತ್ತಲೇ ಇರುವ ವರ್ಮಾ ಅವರಿಗೆ ಇದೀಗ ಜೈಲು ಶಿಕ್ಷೆ ಆಗಿರುವುದು ಟಾಲಿವುಡ್ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದೆ.
ಮುಂದಿನ ಮೂರು ತಿಂಗಳಲ್ಲಿ ದೂರುದಾರರಿಗೆ ರೂ.3.72 ಲಕ್ಷ ಪರಿಹಾರ ನೀಡುವಂತೆ ಕೋರ್ಟ್ ಆದೇಶ ಹೊರಡಿಸಿದೆ. ಪರಿಹಾರವನ್ನು ಪಾವತಿಸಲು ವಿಫಲವಾದಲ್ಲಿ, ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 3 ತಿಂಗಳ ಸಾದಾ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
2018ರಲ್ಲಿ ಮುಂಬೈನಲ್ಲಿ ರಾಮ್ ಗೋಪಾಲ್ ವರ್ಮಾ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಆ ಸಮಯದಲ್ಲಿ ಮಹೇಶ್ಚಂದ್ರ ಮಿಶ್ರಾ ಎಂಬ ವ್ಯಕ್ತಿ ರಾಮಗೋಪಾಲ್ ವರ್ಮಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಕಳೆದ ಏಳು ವರ್ಷಗಳಿಂದ ಪ್ರಕರಣದ ತನಿಖೆ ನಡೆಯುತ್ತಿತ್ತು. ಹಲವು ಬಾರಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಆರ್ಜಿವಿಗೆ ನೋಟಿಸ್ ನೀಡಿದರೂ ಅವರು ಕೋರ್ಟ್ಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗೆ ಇದೀಗ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.