ಕಾರವಾರ:- ಆಗಂತುಕರು ಸಿನಿಮೀಯ ರೀತಿಯಲ್ಲಿ ಉದ್ಯಮಿಯನ್ನು ಅಪಹರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿ ಜರುಗಿದೆ.
‘ಒಲವಿನ ಉಡುಗೊರೆ ಕೊಡಲೇನು’ ಸೇರಿದಂತೆ ಹಲವು ಹಾಡುಗಳನ್ನು ಹಾಡಿದ ಖ್ಯಾತ ಗಾಯಕ ಪಿ. ಜಯಚಂದ್ರನ್ ನಿಧನ
ದರ್ಗಾವಾಲೆ ಎಂಬಾತ ಅಪಹರಣಕ್ಕೊಳಗಾದ ವ್ಯಕ್ತಿ. ಪಟ್ಟಣ ಮಾದರಿ ಶಾಲೆಯ ಎದುರು ಸ್ಕೂಟಿಯಲ್ಲಿ ಸ್ನೇಹಿತನ ಜೊತೆ ತೆರಳುತ್ತಿದ್ದಾಗ ಬಿಳಿ ಕಾರೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದು ಈತನನ್ನು ಬೀಳಿಸಿದ್ದಾರೆ.
ಸ್ಕೂಟಿಯಲ್ಲಿ ಸ್ನೇಹಿತನ ಜೊತೆ ತೆರಳುತ್ತಿದ್ದಾಗ ಬಿಳಿ ಕಾರೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದು ಈತನನ್ನು ಬೀಳಿಸಿದ್ದಾರೆ.
ಬಿದ್ದಾಗ ಈತನ ಮೇಲೆ ಹಲ್ಲೆ ಮಾಡಿ ಕಾರಿನೊಳಗೆ ಹಾಕಿಕೊಂಡಿದ್ದು, ಇನ್ಬೊಬ್ಬನಿಗೆ ಚಾಕು ತೋರಿಸಿ ಓಡಿಸಿದ್ದಾರೆ. ನಂತರ ಹಾವೇರಿ ಮಾರ್ಗವಾಗಿ ಟೋಲ್ ದಾಟಿ ವಾಹನ ಚಲಾಯಿಸಿಕೊಂಡು ಪರಾರಿಯಾಗಿದ್ದಾರೆ.
ಈತನನ್ನು ಅಪಹರಣ ಮಾಡಲು ಕಾರಣ ತಿಳಿಯಬೇಕಿದ್ದು, ಅಪಹರಣ ಮಾಡಿದವರು ಹಾವೇರಿ ಭಾಗದವರೆಂದು ಶಂಕಿಸಲಾಗಿದೆ. ಪೊಲೀಸರು ಸಹ ವಾಹನದ ಟ್ರಾಕ್ ಮಾಡಿ ತನಿಖೆ ಕೈಗೊಂಡಿದ್ದಾರೆ.