ಮೈಸೂರು: ಬೆಳಕಿನ ಹಬ್ಬ ದೀಪಾವಳಿಗೆ ದಿನಗಣನೆ ಆರಂಭವಾಗಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರಾಟ ಮತ್ತು ಬಳಕೆ ನಿಯತ್ರಿಸುವ ಕುರಿತು ಜಿಲ್ಲಾಡಳಿತ ಸುತ್ತೋಲೆ ಹೊರಡಿಸಿದೆ. ಪಟಾಕಿಗಳ ಸಿಡಿತದಿಂದ ಉಂಟಾಗುವ ಶಬ್ಧ ಹಾಗು ಸಾರ್ವಜನಿಕ ಆಸ್ತಿ ಹಾಗೂ ಆರೋಗ್ಯ ಸಂರಕ್ಷಣೆ ಹಿನ್ನೆಲೆಯಲ್ಲಿ ಹಲವು ನಿಯಮ ಜಾರಿ ಮಾಡಿದೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಗೆ ನಿಷೇಧ ಹೇರಿದೆ. ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಜೊತೆಗೆ ಕ್ಯೂ ಅರ್ ಕೋಡ್, ಸದರಿ ಚಿಹ್ನೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯಲ್ಲ ಎಂದು ಹೇಳಿದೆ. ಒಂದು ವೇಳೆ ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮತ್ತು ಬಳಕೆ ಮಾಡಿದರೇ ಕ್ರಮ ಕೈಗೊಳ್ಳಲಾಗುವುದು ಎಂದಿದೆ.