ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಅಡಿ ಇದೇ ಮೊದಲ ಬಾರಿಗೆ 14 ಮಂದಿಗೆ ಭಾರತದ ಪೌರತ್ವದ ನೀಡಲಾಗಿದೆ. ಕೇಂದ್ರ ಸರ್ಕಾರ ಸಿಎಎ ಕಾಯ್ದೆ ಜಾರಿ ಸಂಬಂಧ ಅಧಿಸೂಚನೆ ಹೊರಡಿಸಿದ 2 ತಿಂಗಳ ಬಳಿಕ ಪೌರತ್ವ ನೀಡಲಾಗಿದೆ. ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ ಬಳಿಕ ಈ ಕುರಿತ ಪ್ರಕ್ರಿಯೆಗಳು ಆರಂಭವಾದವು. ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾ ದೇಶದಿಂದ ಭಾರತಕ್ಕೆ ಬರುವ ಮುಸ್ಲಿಮೇತರರಿಗೆ ಭಾರತದ ಪೌರತ್ವ ನೀಡುವ ಕಾಯ್ದೆ ಇದಾಗಿದೆ.
ಸಿಎಎ ಕಾಯ್ದೆ ಅಡಿ ಭಾರತದ ಪೌರತ್ವ ಪಡೆಯಲು ಬೇಕಾದ ಅರ್ಹತಾ ಅವಧಿಯನ್ನು 11 ವರ್ಷಗಳಿಂದ 5 ವರ್ಷಕ್ಕೆ ಕಡಿತ ಮಾಡಲಾಗಿದ. 2014ರ ಡಿಸೆಂಬರ್ 31ರ ಒಳಗೆ ಪಾಕಿಸ್ತಾನ, ಬಾಂಗ್ಲಾ ದೇಶ ಹಾಗೂ ಅಫ್ಘಾನಿಸ್ತಾನದಿಂದ ಬಂದ ಮುಸ್ಲಿಮೇತರರಿಗೆ ಭಾರತದ ಪೌರತ್ವ ಸಿಗಲಿದೆ.
https://ainlivenews.com/bumper-job-in-bmtc-for-second-puc-pass-apply-now/
ಈ ಕಾಯ್ದೆಯಡಿ ಮೊಟ್ಟ ಮೊದಲ ಬಾರಿಗೆ ಭಾರತದ ಪೌರತ್ವ ಗಳಿಸಿರುವ 14 ಮಂದಿಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ದಿಲ್ಲಿಯಲ್ಲಿ ಪ್ರಮಾಣ ಪತ್ರ ಹಸ್ತಾಂತರ ಮಾಡಿದರು. ಈ ವೇಳೆ ಅವರು ಸಿಎಎ ಕಾಯ್ದೆಯ ಮಹತ್ವ ಹಾಗೂ ಪ್ರಾಮುಖ್ಯತೆಯನ್ನು ವಿವರಿಸಿದರು. ಈ ಸಭೆಯಲ್ಲಿ ಭಾರತದ ರಿಜಿಸ್ಟ್ರಾರ್ ಜನರಲ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.