ಬೆಂಗಳೂರು:- ಬೆಳಗಾವಿ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ ಪ್ರಕರಣದಲ್ಲಿ ಸಿಟಿ ರವಿ ಅವರು ಪೊಲೀಸರಿಂದ ಬಂಧನ ನಂತರ ಬಿಡುಗಡೆಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರವಿ ಸರ್ಕಾರ ಮತ್ತು ಪೊಲೀಸರ ವಿರುದ್ಧ ಕಿಡಿಕಾರಿದ್ದರು. ಇದೀಗ ಸುವರ್ಣ ಸೌಧದಿಂದ ಬಂಧನವಾಗಿ ಬಿಡುಗಡೆವರೆಗೂ ನಡೆದ ಘಟನೆಯ ಬಗ್ಗೆ ಸಿಟಿ ರವಿ ಅವರು ಕಾನೂನು ಹೋರಾಟಕ್ಕೆ ಸಿದ್ದತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ನನ್ನೇ ಯಾಕೆ ಟಾರ್ಗೆಟ್ ಮಾಡ್ತಾರೆ? ನನಗೆ ನ್ಯಾಯ ಬೇಕು: ಕೆರಳಿದ ಡ್ರೋನ್ ಪ್ರತಾಪ್!
ಇನ್ನೂ ಸುವರ್ಣಸೌಧದಲ್ಲಿ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂಬ ಸುದ್ದಿ ದೇಶದಲ್ಲೇ ಚರ್ಚೆ ಆಯ್ತು. ಅಷ್ಟೇ ಯಾಕೆ ರವಿ ಅವರ ಮೇಲೆ ಅಟ್ಯಾಕ್ ಕೂಡ ಆಯ್ತು. ಅರೆಸ್ಟ್ ಕೂಡ ಆದ್ರೂ. ಬಳಿಕ ಜಾಮೀನು ಮೇಲೆ ಹೊರ ಬಂದ್ರೂ.
ಇನ್ನೂ ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿ ಹೆಸರು ತಳಕು ಹಾಕದಂತೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದೆ. ಈ ವಿಚಾರವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ದೂರವಾಣಿ ಕರೆ ಮಾಡಿ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದು ಸಿಟಿ ರವಿ ಹೇಳಿದ್ದಕ್ಕೆ ಕೊಲೆಗಾರ ಪದ ಬಳಸಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಮರ್ಥನೆ ಮಾಡಿಕೊಂಡಿದ್ದರು. ಈ ಘಟನೆ ನಡೆದ ಸಂದರ್ಭದಲ್ಲೇ ಕಾಂಗ್ರೆಸ್ ನಾಯಕರೊಬ್ಬರು ಹೈಕಮಾಂಡ್ಗೆ ಮಾಹಿತಿ ನೀಡಿದ್ದರುನ ಎನ್ನಲಾಗಿದೆ. ಹಿರಿಯ ಪರಿಷತ್ ಸದಸ್ಯ ಕೆಸಿ ವೇಣುಗೋಪಾಲ್ಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ತಕ್ಷಣವೇ ರಾಹುಲ್ ಗಾಂಧಿಗೆ ಕೆಸಿ ವೇಣುಗೋಪಾಲ್ ವಿಚಾರ ತಿಳಿಸಿದ್ದರು. ಇದೇ ವೇಳೆ, ಘಟನೆಯಲ್ಲಿ ತಮ್ಮ ಹೆಸರು ಪ್ರಸ್ತಾಪ ಮಾಡ್ತಿರುವುದಕ್ಕೆ ರಾಹುಲ್ ಗಾಂಧಿ ಗರಂ ಆಗಿದ್ದರು ಎನ್ನಲಾಗಿದೆ.
ರಾಹುಲ್ ಗಾಂಧಿ ಸಿಟ್ಟಾಗುತ್ತಿದ್ದಂತೆಯೇ ಪರಿಷತ್ ಸದಸ್ಯನಿಗೆ ವೇಣುಗೋಪಾಲ್ ವಾಪಸ್ ಕರೆ ಮಾಡಿದ್ದಾರೆ. ಸಭಾಪತಿ ಕೊಠಡಿಯಲ್ಲಿ ಇದ್ದಾಗಲೇ ಪರಿಷತ್ ಸದಸ್ಯನಿಗೆ ದೆಹಲಿಯಿಂದ ಕರೆ ಬಂದಿದೆ. ಈ ವೇಳೆ ಕರೆ ಸ್ವೀಕರಿಸಿದ ಪರಿಷತ್ ಸದಸ್ಯ, ಪ್ರಭಾವಿ ಸಚಿವರಿಗೆ ಪೋನ್ ಕೊಟ್ಟಿದ್ದಾರೆ. ಇದೇ ವೇಳೆ, ರಾಹುಲ್ ಗಾಂಧಿ ಹೆಸರು ಈ ವಿಚಾರದಲ್ಲಿ ತಳಕು ಹಾಕಬೇಡಿ ಎಂದು ಸಚಿವರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ರಾಹುಲ್ ಗಾಂಧಿ ಹೆಸರು ಯಾಕೆ ಪ್ರಸ್ತಾಪ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.
ಇದೇ ಕಾರಣಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೀಡಿರುವ ದೂರಿನಲ್ಲಿಯೂ ರಾಹುಲ್ ಗಾಂಧಿ ವಿಚಾರ ಪ್ರಸ್ತಾಪ ಇಲ್ಲ. ದೂರಿನಲ್ಲಿ, ಕೇವಲ ರಾಷ್ಟ್ರೀಯ ನಾಯಕರು ಎಂದಷ್ಟೇ ಉಲ್ಲೇಖಿಸಲಾಗಿದೆ