ದೆಹಲಿ ಮತ್ತು ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಧರ್ಮಸಂಸದ್‌ಗಳಲ್ಲಿ ದ್ವೇಷಪೂರಿತ ಭಾಷಣ ಮಾಡಿದ್ದಕ್ಕಾಗಿ ಸುಮೋಟೋ ಪ್ರಕರಣ ದಾಖಲಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ನ್ಯಾಯಮೂರ್ತಿ ಎನ್‌ವಿ ರಮಣ ಅವರಿಗೆ ಒಟ್ಟು 75 ವಕೀಲರು ಪತ್ರ ಬರೆದಿದ್ದಾರೆ. ಸಮಾರಂಭದಲ್ಲಿ ಮಾತನಾಡಿದವರು ಸಮುದಾಯದಲ್ಲಿ ದ್ವೇಷವನ್ನು ಹುಟ್ಟುಹಾಕಿದ್ದಲ್ಲದೆ, ಒಂದು ಧರ್ಮದವರೆಲ್ಲರನ್ನು ಕೊಲ್ಲುವಂತೆ ಸಾರ್ವಜನಿಕವಾಗಿ ಕರೆ ನೀಡಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಇಂತಹ ಭಾಷಣಗಳು ದೇಶದ ಸಮಗ್ರತೆ ಮತ್ತು ಏಕತೆಗೆ ಕೊಡಲಿ ಪೆಟ್ಟು ಆಗುವುದಲ್ಲದೆ ಲಕ್ಷಾಂತರ ಮುಸ್ಲಿಂ ನಾಗರಿಕರ ಪ್ರಾಣಕ್ಕೆ ಅಪಾಯ ತಂದೊಡ್ಡುತ್ತವೆ. ಪತ್ರಕ್ಕೆ ಹಿರಿಯ ವಕೀಲರಾದ ಸಲ್ಮಾನ್ ಖುರ್ಷಿದ್, ದುಷ್ಯಂತ್ ದವೆ ಮತ್ತು ಮೀನಾಕ್ಷಿ ಅರೋರಾ ಸಹಿ ಹಾಕಿದ್ದಾರೆ.
