ಹಾವೇರಿ: ಶಿಗ್ಗಾಂವಿ ಉಪಕದನ ಕಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅಖಾಡಕ್ಕೆ ಧುಮುಕಿದ್ದು ಸಾಂಕೇತಿಕವಾಗಿ ನಾಮಪತ್ರ ಕೂಡ ಸಲ್ಲಿಕೆ ಮಾಡಿದ್ದಾರೆ. ಇತ್ತ ಕೈ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಆದ್ರೆ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆ ವಿಚಾರದಲ್ಲಿ ಅಸಮಾಧಾನ ಭುಗಿಲೆದ್ದಿದ್ದು ಅದನ್ನು ಶಮನ ಮಾಡಲು ಸಚಿವ ಜಮೀರ್ ಅಹ್ಮದ್ ಅವರು ತೆರಳಿದ್ದಾಗ ಅವರಿದ್ದ ಕಾರಿಗೆ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ದೀಪಾವಳಿಗೆ Samsung ಫೋನ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ! ಇಲ್ಲಿದೆ ಬೆಸ್ಟ್ ಆಫರ್!
ಅಲ್ಲಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಇದರಿಂದ ರೊಚ್ಚಿಗೆದ್ದಿರುವ ಸ್ಥಳೀಯ ನಾಯಕರಾದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರ ಬೆಂಬಲಿಗರು ಜಮೀರ್ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದೆ. KA 27 N 8960 ಹೆಸರಿನ ಕಾರಿನ ಗ್ಲಾಸ್ ಒಡೆದಿರುವ ಖಾದ್ರಿ ಬೆಂಬಲಿಗರು. ಕಾರು ಅಡ್ಡ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಸಾವಿರಾರು ಖಾದ್ರಿ ಅಭಿಮಾನಿಗಳು.