ಹಾಸನ:- ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕೆ.ಬಿ.ಪಾಳ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ಬಡಿದಾಡಿಕೊಂಡ ಘಟನೆ ಜರುಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನಲ್ಲಿ ಕಡಿಮೆ ಮತದಾನವಾಗಲು ಕಾರಣ ಏನು!? – ಇಲ್ಲಿದೆ ಡೀಟೈಲ್ಸ್..!
ಗಾಯಾಳುಗೆ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಅದರಂತೆ ಇಂದು(ಏ.26) ಹೊಳೆನರಸೀಪುರ ತಾಲೂಕಿನ ಮತಗಟ್ಟೆ ಸಂಖ್ಯೆ 249 ಕ್ಕೆ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ತಾಯಿ ಭೇಟಿ ನೀಡಿದ್ದರು. ಈ ವೇಳೆ ಜೆಡಿಎಸ್ ಕಾರ್ಯಕರ್ತರು ಸ್ವ ಪಕ್ಷಕ್ಕೆ ಜೈಕಾರ ಕೂಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಕೈ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಪರ ಘೋಷಣೆ ಕೂಗಿದ್ದಾರೆ. ಇನ್ನು ಈ ಘೋಷಣೆ ವಿಕೋಪಕ್ಕೆ ತಿರುಗಿ ಎರಡು ಪಕ್ಷದವರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಕಬ್ಬಿಣದ ರಾಡ್ನಿಂದ ಜೆಡಿಎಸ್ ಕಾರ್ಯಕರ್ತರು, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಇದರಲ್ಲಿ ಮೋಹನ್ಕುಮಾರ್, ಗಿರೀಶ್ ಮಂಜುನಾಥ್ ಎಂಬುವವರಿಗೆ ಗಾಯವಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಕಾಂಗ್ರೆಸ್ ಕಾರ್ಯಕರ್ತ ಮೋಹನ್ಕುಮಾರ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.