ಗಂಗಾವತಿ ;- ತಾಲೂಕಿನ ಜಂತಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ನಾಗನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯ ನೀರಿನ ಘಟಕ ಸ್ಥಗಿತಗೊಂಡಿದೆ.
ನಗರದಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ನಿರ್ಮಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ವಹಣೆ ಇಲ್ಲದೆ ಹಾಳಾಗಿವೆ. ನಾಗನಹಳ್ಳಿ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ
ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಲಾಗಿದೆ.

ಶುದ್ಧ ಕುಡಿಯುವ ನೀರಿನ ಘಟಕಗಳು ಕಳೆದ ಹಲವು ತಿಂಗಳುಗಳಿಂದ ಸ್ಥಗಿತಗೊಂಡಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಇದಕ್ಕೆ ಮುಂದಾಗ್ತಾರೆ ಎಂಬುದನ್ನು ಕಾದು ನೋಡಬೇಕಾಗುತ್ತದೆ
