ಬೀದರ್: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸ್ಚಚ್ಛ ಮಂದಿರ ಅಭಿಯಾನದನ್ವಯ ಮಾಜಿ ಸಚಿವ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಕಮಲನಗರ ತಾಲ್ಲೂಕಿನ ಸಂಗಮ ಗ್ರಾಮದ ಸುಕ್ಷೇತ್ರ ಸಂಗಮೇಶ್ವರ ದೇವಸ್ಥಾನವನ್ನು ಸ್ವಚ್ಛಗೊಳಿಸಿದರು.
ಕೈಯಲ್ಲಿ ಪೊರಕೆ ಹಿಡಿದು ಸ್ವಚ್ಛತಾ ಕಾರ್ಯಕ್ಕೆ ಇಳಿದ ಶಾಸಕರು ನೀರಿನಿಂದ ಗರ್ಭಗುಡಿ ಸೇರಿದಂತೆ ದೇವಸ್ಥಾನದ ಆವರಣವೆಲ್ಲಾ ಸ್ವಚ್ಛಗೊಳಿಸಿದರು. ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಸಾಥ್ ನೀಡಿದರು. ದೇವಸ್ಥಾನದಲ್ಲಿ “ಜೈ ಶ್ರೀರಾಮ” ಎಂಬ ಜಯಘೋಷಗಳು ಕೇಳಿಸಿದವು.
ಬಳಿಕ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಶಾಸಕರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೆಂಬುದು 500 ವರ್ಷಗಳ ಬೇಡಿಕೆಯಾಗಿತ್ತು. ಇದಕ್ಕಾಗಿ ಅನೇಕ ಹೋರಾಟಗಳಾಗಿವೆ. ಇಷ್ಟು ದಿನ ಕೇವಲ ಭರವಸೆ ಮತ್ತು ಆಶ್ವಾಸನೆಗಳು ಮಾತ್ರ ಸಿಗುತ್ತಿದ್ದವು. ಮಂದಿರ ಮಾತ್ರ ನಿರ್ಮಾಣವಾಗಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಇಚ್ಛಾಶಕ್ತಿಯಿಂದಾಗಿ ಇದು ಸಾಕಾರಗೊಂಡಿದೆ. ಅಯೋಧ್ಯೆಯಲ್ಲಿ ಸುಂದರ ಮತ್ತು ಭವ್ಯವಾದ ಮಂದಿರ ನಿರ್ಮಾಣಗೊಂಡಿದೆ. ಜನವರಿ 22ರಂದು ಪ್ರಧಾನಿಯವರ ಅಮೃತ ಹಸ್ತದಿಂದ ಉದ್ಘಾಟನೆ ನೆರವೇರಲಿದೆ ಎಂದರು……