ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಸ್ವಚ್ಛತಾ ಕಾರ್ಯ ಮಾಡಲಾಯಿತು. ದೇವಸ್ಥಾನದ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ನಾಗರಿಕ ಪ್ರಜ್ಞೆ ಹಾಗು ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು
ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವ ಸಂದೇಶ ರವಾನಿಸಿದರು..ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕರಾದ ಶಿವರಾಮ ಪ್ರಭು,ಶ್ರೀನಿವಾಸ ಜಾಲವಾದಿ, ಯೋಜನಾಧಿಕಾರಿಗಳಾದ ಸಂತೋಷ್ ಕುಮಾರ, ರಾಘವೇಂದ್ರ ಬಕ್ರಿ, ಸಿಬ್ಬಂದಿಗಳು ಸೇವಾ ಪ್ರತಿನಿಧಿಗಳು ಭಾಗಿಯಾಗಿದ್ದರು
