ಬೆಂಗಳೂರಿನ ಜಗನ್ನಾಥ ಭವನದಲ್ಲಿ ಕೋವಿಡ್ ಜಾಗೃತಿ ಕೈಗೊಳ್ಳುವ ಕುರಿತು ಸಭೆ ನಡೆಸಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಕೈಗೊಳ್ಳಲಾಯಿತು. ಸಭೆಯಲ್ಲಿ ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮಹಾನಗರದಲ್ಲಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ಬೆಂಗಳೂರು ದಕ್ಷಿಣ, ಉತ್ತರ ಹಾಗೂ ಕೇಂದ್ರ ಜಿಲ್ಲೆಗಳ ಸಚಿವರು, ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು. ಈ ವೇಳೆ ಕೊರೊನಾ ತಡೆಗಟ್ಟಲು ಬೆಂಗಳೂರಿನ ಜನತೆ ಸಹಕಾರಿಯಾಗಬೇಕು, ತಪ್ಪದೇ ಕೊವಿಡ್ ಲಸಿಕೆ ಹಾಕಿಸಿಕೊಳ್ಳಿ, ಇತರರಿಗೂ ಸಲಹೆ ನೀಡಿ ಎಂದು ಸೂಚನೆ ನೀಡಿದರು.
