ಮೈಸೂರು: ಪೆನ್ ಡ್ರೈವ್ ಹಂಚಿಕೆಯಾಗಿರುವುದರ ಹಿಂದೆ ಸಿಎಂ ಹಾಗೂ ಡಿಸಿಎಂ ಕೈವಾಡ ಇದೆ ಎಂದು ಶಾಸಕ ಜಿ.ಟಿ. ದೇವೇಗೌಡ ಆರೋಪಿಸಿದರು. ನಗರದಲ್ಲಿ ಮಾತನಾಡಿದ ಅವರು, ‘ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋಗಳು ಇರುವ ಪೆನ್ಡ್ರೈವ್ಗಳನ್ನ ಹಂಚಿಕೆ ಮಾಡಿರುವ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಸಿಗುವಂತಾಗಬೇಕು. ಪೆನ್ ಡ್ರೈವ್ ಹಂಚಿಕೆಯಾಗಿರುವುದರ ಹಿಂದೆ ಸಿಎಂ ಹಾಗೂ ಡಿಸಿಎಂ ಕೈವಾಡ ಇದೆ.
ರೈತರೇ ಗಮನಿಸಿ.. ಸಪೋಟ ಹಣ್ಣಿನ ಕೃಷಿಯಿಂದ ಗಳಿಸಬಹುದು ಲಕ್ಷಗಟ್ಟಲೇ ಆದಾಯ..!
ಜೊತೆಗೆ ಈ ಮೂಲಕ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಕುಟುಂಬಕ್ಕೆ ಕಳಂಕ ತರುವ ರೀತಿಯಲ್ಲಿ ಷಡ್ಯಂತ್ರ ಮಾಡಲಾಗಿದೆ. ಕೂಡಲೇ ಡಿ.ಕೆ. ಶಿವಕುಮಾರ್ ಅವರನ್ನ ಸಂಪುಟದಿಂದ ತೆಗೆದು ಹಾಕಿ, ಇಡೀ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಬೇಕು. ಪೆನ್ಡ್ರೈವ್ಗಳನ್ನ ತಯಾರಿಕೆ ಮಾಡುವುದರಲ್ಲಿ ಡಿ.ಕೆ. ಶಿವಕುಮಾರ್ ಪಾತ್ರ ಇದೆ” ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಶಾಸಕ ಜಿ. ಟಿ. ದೇವೇಗೌಡ ಆರೋಪಿಸಿದರು.