ಬೆಂಗಳೂರು: ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈ ಹಿನ್ನೆಲೆ ಪಾದಯಾತ್ರೆಗೆ ಭಾಗಿಯಾಗು ವಂತೆ ಸರ್ವ ಪಕ್ಷಕ್ಕೂ ಆಹ್ವಾನ ನೀಡಲಾಗಿದೆ. ಇನ್ನೂ ಸಿಎಂ ಬಸವರಾಜ್ ಬೊಮ್ಮಾಯಿಗೂ ಕೂಡ ಡಿಕೆ ಶಿವಕುಮಾರ್ ಪಾದಯಾ ತ್ರೆಯಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಿದ್ದಾರೆ. ಜೊತೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾಜಿ ಸಿಎಂ ಯಡಿಯೂರಪ್ಪ, ಹಾಗೂ ಮಾಜಿ ಸಿಎಂ ಕುಮಾರಸ್ವಾಮಿಗೂ ಪಾದಯಾತ್ರೆಯ ಆಮಂತ್ರಣ ನೀಡಿದ್ದಾರೆ. ಹಾಗೂ ಎಲ್ಲರೂ ಪಕ್ಷಾತೀತವಾಗಿ ಈ ಹೋರಾಟದಲ್ಲಿ ಭಾಗಿಯಾಗುವಂತೆ ಡಿಕೆ ಶಿವಕುಮಾರ್ ಪಕ್ಷದ ಎಲ್ಲಾ ನಾಯಕರಿಗೂ ಪತ್ರ ಬರೆದು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.
