ಬೆಂಗಳೂರು: ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಸಚಿವ ವಿ ಸೋಮಣ್ಣ ಭೇಟಿ ಮಾಡಿದರು. ನಂತರ ಸೌಹಾರ್ದಯುತ ಮಾತುಕತೆ ನಡೆಸಿದರು. ಈ ವೇಳೆ ಸಚಿವ ಸಿಸಿ ಪಾಟೀಲ್ ಹಾಗೂ ಸಚಿವ ಬಿ.ಸಿ ನಾಗೇಶ್ ಅವರು ಕೂಡ ಜೊತೆಗಿದ್ದರು. ಈ ವೇಳೆ ಮಾತನಾಡಿದ ಸಿಎಂ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳುವವರಲ್ಲಿ ಸೋಮಣ್ಣ ಮೊದಲಿಗರು, ಅವರು ಕ್ಷೇತ್ರದ ಉಸ್ತುವಾರಿಯನ್ನು ಚೆನ್ನಾಗಿ ನಿಭಾಯಿಸುತ್ತಿದ್ದಾರೆ ಎಂದರು.
ಬೆಂಗಳೂರಿನಲ್ಲಿ 1.80 ಲಕ್ಷ ಮನೆಗಳನ್ನು ನಿರ್ಮಿಸುತ್ತಿದ್ದು, ಗ್ರಾಮೀಣ ಭಾಗದಲ್ಲಿ 5 ಲಕ್ಷ ಮನೆ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿಸಿಕೊಂಡಿದ್ದಾರೆ. ಸ್ಲಂ ನಿವಾಸಿಗಳು ಮತ್ತು ಮಧ್ಯಮ ವರ್ಗದ ಜನರ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಸಚಿವ ವಿ. ಸೋಮಣ್ಣ ಧನ್ಯವಾದ ತಿಳಿಸಿದ್ದು, ನಮ್ಮ ಸರ್ಕಾರ ಸಹಕಾರದಿಂದಾಗಿ ನನ್ನ ಕೆಲಸ ಸುಲಭಗೊಳ್ಳುತ್ತಿದೆ ಅಷ್ಟೆ ಎಂದರು.
